‘ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ ಇದೇ 29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅಕ್ಟೋಬರ್ 27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ. ಗ್ರಾಮ ಆಡಳಿತಾಧಿಕಾರಿ ಒಂದು ಸಾವಿರ ಹುದ್ದೆಗಳಿಗೆ 5.7 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಈ ಪರೀಕ್ಷೆಗೂ ತಯಾರಿ ನಡೆಸಲಾಗಿದೆ’ ಎಂದು ಅವರು ವಿವರಿಸಿದ್ದಾರೆ.