ಬೆಂಗಳೂರು: ಕೋವಿಡ್ ಎರಡನೇ ಅಲೆ ಹಲವು ಕುಟುಂಬಗಳ ಖುಷಿ ಕಸಿದುಕೊಂಡಿದೆ. ಈ ಪಿಡುಗಿನಿಂದಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗುತ್ತಿರುವ ಮಕ್ಕಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಈವರೆಗೆ ಒಟ್ಟು42 ಮಂದಿ ಮಕ್ಕಳು ಹೆತ್ತವರನ್ನು ಕಳೆದುಕೊಂಡಿದ್ದಾರೆ. ಇವರ ಬದುಕು ಡೋಲಾಯಮಾನವಾಗಿದೆ.

ರಾಯಚೂರಿನಲ್ಲಿ ನಾಲ್ಕು ಮಕ್ಕಳು ತಬ್ಬಲಿಗಳಾಗಿದ್ದಾರೆ. ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ, ಕೊಡಗು ಹಾಗೂ ಕೋಲಾರದಲ್ಲಿ ತಲಾ ಮೂವರು, ಬೆಳಗಾವಿ, ಬೆಂಗಳೂರು ನಗರ, ಗದಗ, ಹಾಸನ, ಮೈಸೂರು ಹಾಗೂ ರಾಮನಗರದಲ್ಲಿ ತಲಾ ಇಬ್ಬರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ ಮತ್ತು ಮಂಡ್ಯದಲ್ಲಿ ತಲಾ ಒಬ್ಬರು ಮನೆಯ ಆಧಾರಸ್ಥಂಭವಾಗಿದ್ದ ಅಪ್ಪ, ಅಮ್ಮನನ್ನು ಕಳೆದುಕೊಂಡಿದ್ದಾರೆ.

ಪಾಲಕರನ್ನು ಕಳೆದುಕೊಂಡವರ ಪೈಕಿ20 ಮಂದಿ ಒಂಟಿ ಮಕ್ಕಳು. ಉಳಿದ22 ಮಂದಿ ಒಡಹುಟ್ಟಿದವರು. ಸದ್ಯ ಈ ಮಕ್ಕಳು, ಅಜ್ಜಿ, ಚಿಕ್ಕಮ್ಮ, ಚಿಕ್ಕಪ್ಪ, ಅತ್ತೆ ಸೇರಿದಂತೆ ಆಪ್ತರ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ.

‘ಅನಾಥ ಮಕ್ಕಳಿಗಾಗಿ ರಾಜ್ಯ ಸರ್ಕಾರವು ‘ಬಾಲಸೇವಾ ಯೋಜನೆ’ ಜಾರಿಗೆ ತರಲಿದ್ದು ಮಾಸಿಕ₹3,500 ನೆರವು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಈ ಮಕ್ಕಳಿಗೆ ಉಚಿತ ಊಟ, ವಸತಿ ಮತ್ತು ಶಿಕ್ಷಣ ಒದಗಿಸಲು ಹಲವು ಮಠಗಳು ಹಾಗೂ ಸಂಘ ಸಂಸ್ಥೆಗಳು ಮುಂದೆ ಬಂದಿವೆ. ಮಕ್ಕಳನ್ನು ಸರ್ಕಾರದಿಂದ ನಡೆಸುವ ಆರೈಕೆ ಕೇಂದ್ರಗಳಿಗೆ ಸೇರಿಸಿದರೆ ಸರಿಯಾಗಿ ನೋಡಿಕೊಳ್ಳುವುದಿಲ್ಲ ಎಂದು ಸಂಬಂಧಿಕರು ಹೆದರುತ್ತಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.