ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೇಶನದಾರರಿಂದ ಕೆಐಎಡಿಬಿಗೆ ₹4,248 ಕೋಟಿ ಬಾಕಿ

4 ತಿಂಗಳಲ್ಲಿ ಬಾಕಿ ವಸೂಲಿ ಮಾಡಿ: ಎಂ ಬಿ ಪಾಟೀಲ ತಾಕೀತು
Published 13 ಅಕ್ಟೋಬರ್ 2023, 16:05 IST
Last Updated 13 ಅಕ್ಟೋಬರ್ 2023, 16:05 IST
ಅಕ್ಷರ ಗಾತ್ರ

ಬೆಂಗಳೂರು: ಕೈಗಾರಿಕೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ನಿವೇಶನ ಪಡೆದಿರುವ ಉದ್ಯಮಿದಾರರು ₹4,248 ಕೋಟಿ ಬಾಕಿ ಉಳಿಸಿಕೊಂಡಿದ್ದು, ಮುಂದಿನ ನಾಲ್ಕು ತಿಂಗಳಿನಲ್ಲಿ ಅವರಿಂದ ವಸೂಲು ಮಾಡಬೇಕು ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಶುಕ್ರವಾರ ಕೆಐಎಡಿಬಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ವಸೂಲು ಮಾಡಲು ವಿಫಲರಾದರೆ ಮಂಡಳಿಯ ಕಾರ್ಯದರ್ಶಿ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದೂ ಎಚ್ಚರಿಸಿದರು.

ಕೆಐಎಡಿಬಿಯಿಂದ ಹಂಚಿಕೆ ಮಾಡಲಾದ ನಿವೇಶನಗಳನ್ನು ಎಷ್ಟೋ ಜನ ಹಾಗೆಯೇ ಇಟ್ಟುಕೊಂಡಿದ್ದಾರೆ. ಉದ್ಯಮ ಸ್ಥಾಪಿಸಿ ತಮ್ಮ ಹೆಸರಿಗೆ ನಿವೇಶನ ಮಾಡಿಸಿಕೊಳ್ಳುವ ಕೊನೆ ಹಂತದಲ್ಲಿ ಇರುವವರು ₹2,100 ಕೋಟಿ ಬಾಕಿ ಉಳಿಸಿಕೊಂಡಿದ್ದಾರೆ. ಇಂಥವರ ವಿರುದ್ಧ ನಾಲ್ಕು ತಿಂಗಳಲ್ಲಿ ಕಠಿಣ ಕ್ರಮ ಜರುಗಿಸಿ ಬಾಕಿ ಹಣ ವಸೂಲಿ ಮಾಡಲೇಬೇಕು. ಕಾನೂನು ಕ್ರಮ ಕೈಗೊಳ್ಳುವ ಜತೆಗೆ ನಿವೇಶನ ಮಂಜೂರಾತಿಯನ್ನೇ ರದ್ದುಪಡಿಸಬೇಕಾದ ಕಠಿಣ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ವಿವರಿಸಿದರು.

ಕೆಐಎಡಿಬಿ ಆರಂಭದಿಂದಲೇ ಇಂತಹ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿತ್ತು. ಆಗ ಈ ಪರಿಸ್ಥಿತಿ ಸೃಷ್ಟಿಯಾಗುತ್ತಿರಲಿಲ್ಲ ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಮಹೇಶ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT