ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಪ್ರದೇಶದ ಬಾಪೂಜಿ ಸೇವಾಕೇಂದ್ರಗಳಲ್ಲಿ 66 ಸರ್ಕಾರಿ ಸೇವೆಗಳು

Published 3 ಅಕ್ಟೋಬರ್ 2023, 15:52 IST
Last Updated 3 ಅಕ್ಟೋಬರ್ 2023, 15:52 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮೀಣ ಜನರಿಗೆ ಅವಶ್ಯವಿರುವ 22 ಸೇವೆಗಳ ಜತೆ ಇನ್ನೂ 44 ಅಗತ್ಯ ಸೇವೆಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್‌ ಇಲಾಖೆಯು ಗ್ರಾಮ ಪಂಚಾಯಿತಿ ಬಾಪೂಜಿ ಸೇವಾಕೇಂದ್ರಗಳಲ್ಲಿ ಆರಂಭಿಸಿದೆ. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಯಿತಿ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರಿಗೆ ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿಯೊಂದು ಹೋಬಳಿಯು ಆರರಿಂದ ಏಳು ಗ್ರಾಮ ಪಂಚಾಯಿತಿಗಳನ್ನು ಹೊಂದಿದ್ದು, ಈ ವ್ಯಾಪ್ತಿಯ 20 ಸಾವಿರದಿಂದ  50 ಸಾವಿರ ಜನರು ವಿವಿಧ ಸರ್ಕಾರಿ ಸೇವೆಗಳನ್ನು ಪಡೆಯಲು ಹೋಬಳಿ ಕೇಂದ್ರಕ್ಕೆ ಹೋಗಬೇಕಾಗಿತ್ತು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಈ ಸಮಸ್ಯೆ ನಿವಾರಿಸಲು 44 ಸೇವೆ ಆರಂಭಿಸಲಾಗಿದೆ ಎಂದು ಹೇಳಿದೆ.

ಯಾವ ಸೇವೆಗಳು ಲಭ್ಯ:

ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ (ಪ್ರವರ್ಗ–ಎ), ಜಾತಿ ಪ್ರಮಾಣ ಪತ್ರ (ಅ.ಜಾ/ಅ.ಪಂ), ಹಿಂದುಳಿದ ವರ್ಗ ಪ್ರ.ಪತ್ರ (ಕೇ.ಸ), ವಾಸ ಸ್ಥಳ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಗೇಣಿ ರಹಿತ ದೃಢೀಕರಣ ಪತ್ರ, ವಿಧವಾ ದೃಢೀಕರಣ ಪತ್ರ, ಜೀವಂತ ದೃಢೀಕರಣ ಪತ್ರ, ವ್ಯವಸಾಯಗಾರರ ಕುಟುಂಬದ ದೃಢೀಕರಣ ಪತ್ರ, ಮರುವಿವಾಹವಾಗದಿರುವ ಬಗ್ಗೆ ದೃಢೀಕರಣ ಪತ್ರ, ಜಮೀನು ಇಲ್ಲದಿರುವ ಬಗ್ಗೆ ದೃಢೀಕರಣ ಪತ್ರ, ಮೃತರ ಕುಟುಂಬ ಸದಸ್ಯರ ದೃಢೀಕರಣ ಪತ್ರ, ನಿರುದ್ಯೋಗಿ ದೃಢೀಕರಣ ಪತ್ರ, ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ, ವ್ಯವಸಾಯಗಾರ ದೃಢೀಕರಣ ಪತ್ರ, ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ.

ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಮೇಲುಸ್ತರಕ್ಕೆ ಸೇರಿಲ್ಲವೆಂದು ದೃಢೀಕರಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ, ಬೋನಫೈಡ್ ದೃಢೀಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ (ಉದ್ಯೋಗದ ಸಲುವಾಗಿ ಮಾತ್ರ), ಆದಾಯ ದೃಢೀಕರಣ ಪತ್ರ (ಅನುಕಂಪದ ಆಧಾರದ ನೇಮಕಾತಿಗೆ), ಕುಟುಂಬ ವಂಶವೃಕ್ಷ ದೃಢೀಕರಣ ಪತ್ರ.

ಹೈದ್ರಾಬಾದ್- ಕರ್ನಾಟಕ ವಿಭಾಗ– ವಲಯದ ವಾಸಸ್ಥಳ ದೃಢೀಕರಣ ಪತ್ರ, ಬೆಳೆ ದೃಢೀಕರಣ ಪತ್ರ, ಅಲ್ಪಸಂಖ್ಯಾತ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಆರ್ಯ ವೈಶ್ಯ), ಆದಾಯ ಹಾಗೂ ಆಸ್ತಿ ಪ್ರಮಾಣಪತ್ರ (EWS), ಜಾತಿ ಪ್ರಮಾಣಪತ್ರ (SC/ST-Migrant), ಅಂಗವಿಕಲ ಪೋಷಣಾ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ರಾಷ್ಟ್ರೀಯ ಕುಟುಂಬ ಕ್ಷೇಮ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಮೈತ್ರಿ, ಮನಸ್ವಿನಿ, ಅಂತ್ಯ ಸಂಸ್ಕಾರ ಯೋಜನೆ, ಆಸಿಡ್ ದಾಳಿಗೊಳಗಾದ ಮಹಿಳೆಯ ವೇತನ, ರೈತರ ವಿಧವಾ ವೇತನ ಮತ್ತು ಎಂಡೋಸಲ್ಫಾನ್ ಸಂತ್ರಸ್ತರ ಪಿಂಚಣಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT