ಬೆಂಗಳೂರು: ವಿಶ್ವವಿದ್ಯಾಲಯ ಅನುದಾನ ಆಯೋಗ ನಿಗದಿಪಡಿಸಿದ ವಿದ್ಯಾರ್ಹತೆಯ ನಿಯಮಗಳನ್ನು ಮೀರಿ ಉನ್ನತ ಶಿಕ್ಷಣ ಇಲಾಖೆ 459 ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಿಕೊಂಡಿದ್ದು, ಅಂಥವರಿಗೆ ಯುಜಿಸಿ ವೇತನಶ್ರೇಣಿ ನೀಡುತ್ತಿರುವುದಕ್ಕೆ ಮಹಾಲೇಖಪಾಲರ ವರದಿ ಆಕ್ಷೇಪ ವ್ಯಕ್ತಪಡಿಸಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 2007–08ನೇ ಸಾಲಿನಲ್ಲಿ ಹಾಗೂ ಇತರೆ ವರ್ಷಗಳಲ್ಲಿ ಅನುದಾನಿತ ಕಾಲೇಜುಗಳು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ಯುಜಿಸಿ ನಿಯಮಕ್ಕೆ ವಿರುದ್ಧವಾಗಿ ಎಂ.ಫಿಲ್ ಪೂರೈಸಿದ್ದ ಅಭ್ಯರ್ಥಿಗಳನ್ನೂ ನೇಮಕ ಮಾಡಿಕೊಂಡಿವೆ. ಸರ್ಕಾರಿ ಕಾಲೇಜುಗಳಲ್ಲಿ 225 ಮತ್ತು ಅನುದಾನಿತ ಕಾಲೇಜುಗಳಲ್ಲಿ 234 ಅಭ್ಯರ್ಥಿಗಳು ಯುಜಿಸಿ ನಿಗದಿಪಡಿಸಿದ ಅರ್ಹತೆ ಹೊಂದಿಲ್ಲ ಎನ್ನುವುದನ್ನು ಲೆಕ್ಕ ಪರಿಶೋಧನಾ ವರದಿ ಉಲ್ಲೇಖಿಸಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರಾಗಿ ಕೆಲಸ ಮಾಡುವವರು ಸ್ನಾತಕೋತ್ತರ ಪದವಿಯ ಜತೆಗೆ ಎನ್ಇಟಿ ಇಲ್ಲವೇ ಕೆ-ಸೆಟ್ ತೇರ್ಗಡೆಯಾಗಿರಬೇಕು, ಪಿಎಚ್.ಡಿ ಪಡೆದಿರಬೇಕು.

‘74 ಸರ್ಕಾರಿ ಹಾಗೂ 21 ಅನುದಾನಿತ ಸಂಸ್ಥೆಗಳಲ್ಲಿ ಯುಜಿಸಿ ನಿಗದಿತ ವಿದ್ಯಾರ್ಹತೆ ಇಲ್ಲದ ಸಹಾಯಕ ಪ್ರಾಧ್ಯಾಪಕರು ಕೆಲಸ ಮಾಡುತ್ತಿದ್ದಾರೆ. ಪಟ್ಟಿ ತರಿಸಿಕೊಳ್ಳಲಾಗಿದ್ದು, ಪರಿಶೀಲನೆ ನಡೆಸಲಾಗುತ್ತದೆ. ನಂತರ ಮುಂದಿನ ಕ್ರಮಕ್ಕೆ ಸರ್ಕಾರಕ್ಕೆ ಕಳುಹಿಸಲಾಗುವುದು’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.