ಶುಕ್ರವಾರ, 25 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ವರ್ಷಕ್ಕೆ ₹5,000 ಕೋಟಿ: ಸಿದ್ದರಾಮಯ್ಯ

Published : 14 ಜೂನ್ 2024, 8:42 IST
Last Updated : 14 ಜೂನ್ 2024, 8:42 IST
ಫಾಲೋ ಮಾಡಿ
Comments
2 ವರ್ಷ ಶೈಕ್ಷಣಿಕ ವರ್ಷ: ಶಿಕ್ಷಣಕ್ಕೆ ಶೇ 25 ಅನುದಾನ
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮುಂದಿನ ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ ಶೇ 25 ರಷ್ಟು ಅನುದಾನವನ್ನು ಶಿಕ್ಷಣಕ್ಕೇ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು ಇದಕ್ಕೆ ಒತ್ತು ನೀಡಬೇಕು. ನಿಗದಿತ ಮಾನದಂಡಗಳಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚಿಸಿದರು. ಉನ್ನತ ಶಿಕ್ಷಣದಲ್ಲಿ 41 ಮಹಿಳಾ ಪದವಿ ಕಾಲೇಜು ಆರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಇದನ್ನು ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಅರಣ್ಯೀಕರಣ ಶುದ್ಧ ಕುಡಿಯುವ ನೀರು ಮತ್ತು ಕಿಂಡಿ ಅಣೆಕಟ್ಟೆಗಳಿಗೆ ಆದ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು ಕಾರ್ಯಕ್ರಮಗಳನ್ನು ರೂಪಿಸುವಂತೆ ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT