ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಬಾಲಕೃಷ್ಣ ಕಾರಿನ ಮೇಲೆ ಚಪ್ಪಲಿ ಎಸೆತ

ಪುರಸಭೆ ಅಧ್ಯಕ್ಷ ಸ್ಥಾನದ ಚುನಾವಣೆ ಗೊಂದಲ
Last Updated 6 ಜನವರಿ 2018, 13:19 IST
ಅಕ್ಷರ ಗಾತ್ರ

ಮಾಗಡಿ: ಇಲ್ಲಿನ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ದಲಿತ ಅಭ್ಯರ್ಥಿಗೆ ಬೆಂಬಲ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಶಾಸಕ ಎಚ್‌.ಸಿ. ಬಾಲಕೃಷ್ಣ ಅವರ ಕಾರಿಗೆ ಚಪ್ಪಲಿ ತೂರಿ, ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

23 ಸದಸ್ಯ ಬಲದ ಮಾಗಡಿ ಪುರಸಭೆಯ ಗದ್ದುಗೆ ಏರಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕಾಂಗ್ರೆಸ್‌ನಿಂದ ಮಾದಿಗ ಸಮುದಾಯಕ್ಕೆ ಸೇರಿದ ಸುಶೀಲಾ ರಂಗಹನುಮಯ್ಯ ಎಂಬುವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಪಕ್ಷೇತರರಾಗಿ ಗೆದ್ದು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದ ಎಚ್‌.ಆರ್. ಮಂಜುನಾಥ್‌ ಅವರ ಹೆಸರೂ ಚಾಲ್ತಿಯಲ್ಲಿತ್ತು. ಸಚಿವ ಎಚ್.ಎಂ. ರೇವಣ್ಣ ಅವರ ಬೆಂಬಲದಿಂದ ಕುರುಬ ಸಮುದಾಯಕ್ಕೆ ಸೇರಿದ ಮಂಜುನಾಥ್‌ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

</p><p>ಈ ಬೆಳವಣಿಗೆಯಿಂದ ಸಿಟ್ಟಿಗೆದ್ದ ರಂಗಹನುಮಯ್ಯ ಹಾಗೂ ಅವರ ಬೆಂಬಲಿಗರು ಬಾಲಕೃಷ್ಣ ಅವರ ಕಾರಿನ ಮೇಲೆ ಚಪ್ಪಲಿ ತೂರಿದರು. ಪುರಸಭೆಯ ಮುಂಭಾಗ ಅರೆಬೆತ್ತಲೆ ಪ್ರತಿಭಟನೆಯನ್ನೂ ನಡೆಸಿದರು. ಶಾಸಕ ಬಾಲಕೃಷ್ಣ ನುಡಿದಂತೆ ನಡೆದುಕೊಳ್ಳದೇ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಸಚಿವರಾದ ಡಿ.ಕೆ. ಶಿವಕುಮಾರ್, ಎಚ್‌.ಎಂ. ರೇವಣ್ಣ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧವೂ ಘೋಷಣೆ ಕೂಗಿದರು.</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT