ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಸಂದೇಶಗಳನ್ನು ಪ್ರಕಟಿಸಲಾಗಿದೆ.

ದೊರೆಸ್ವಾಮಿ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಿದ್ದಕ್ಕೆ ತೀವ್ರ ಆಕ್ಷೇಪವೂ ವ್ಯಕ್ತವಾಗಿವೆ.

ಗೌರಿ ಸ್ಮಾರಕ ಟ್ರಸ್ಟ್ ಬೆಂಗಳೂರಿನಲ್ಲಿ ಸೋಮವಾರ ಆಯೋಜಿಸಿದ್ದ ‘ಗೌರಿ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ್ದ ದೊರೆಸ್ವಾಮಿ, ‘ಮುಂದಿನ ಚುನಾವಣೆ ನಿಜವಾದ ನಮಗೆ ಅಗ್ನಿಪರೀಕ್ಷೆ ಇದ್ದಂತೆ. ಈ ಬಾರಿ ರಾಜ್ಯವನ್ನು ಬಿಜೆಪಿಗೆ ಒಪ್ಪಿಸಿದರೆ ಇಡೀ ದೇಶ ಮೋದಿಯ ತೆಕ್ಕೆಗೆ ಸಿಕ್ಕಂತಾಗುತ್ತದೆ. ಇದನ್ನು ತಡೆಯದಿದ್ದರೆ ಸರ್ವನಾಶ ಖಚಿತ’ ಎಂದು ಎಚ್ಚರಿಕೆ ನೀಡಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕೆಲವರು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಿದ್ದಾರೆ. ದೊರೆಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ಏಜೆಂಟ್ ಎಂದು ಕೆಲವರು ಹೀಯಾಳಿಸಿದ್ದರೆ, ಇನ್ನು ಹಲವರು ಸೈಟ್‌ಗಾಗಿ ಅವರು ಹೀಗೆಲ್ಲ ಹೇಳಿಕೆ ನೀಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.