ಹೊಸಪೇಟೆ: ‘ಬಡತನ ರೇಖೆಗಿಂತ ಕೆಳಗಿನ (ಬಿ.ಪಿ.ಎಲ್.) ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಕಂಬಳಿ ಕೊಡುವ ಉದ್ದೇಶ ಇದೆ. ಈ ಕುರಿತು ಬಜೆಟ್‌ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ’ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು.

ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಹಾಲುಮತ ಅಧ್ಯಯನ ಪೀಠದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇತ್ತೀಚೆಗೆ ಕಂಬಳಿ ತಯಾರಿಸುವ ನೇಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ನಾನೂ ಅಲ್ಲಿಯೇ ಇದ್ದೆ. ಕಂಬಳಿ ನೇಕಾರರನ್ನು ರಕ್ಷಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದರು. ಅವರನ್ನು ಆರ್ಥಿಕವಾಗಿ ಸದೃಢ ಮಾಡಬಹುದು. ಕಂಬಳಿಯನ್ನು ಉಚಿತವಾಗಿ ಕೊಡಬೇಕೋ ಅಥವಾ ರಿಯಾಯಿತಿ ದರದಲ್ಲಿ ಕೊಡಬೇಕು ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.