ಶನಿವಾರಸಂತೆ (ಮಡಿಕೇರಿ): ಸಮೀಪದ ಗ್ರಾಮವೊಂದರ ಬಾಲಕಿಯನ್ನು ವಿವಸ್ತ್ರಗೊಳಿಸಿದ ಮುಸ್ಲಿಂ ಸಮುದಾಯದ ಬಾಲಕನೊಬ್ಬ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ್ದಾನೆ. ಅದನ್ನು ಖಂಡಿಸಿ ಗ್ರಾಮಸ್ಥರು, ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಇಲ್ಲಿನ ಪೊಲೀಸ್ ಠಾಣೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಪಕ್ಕದ ಮನೆಯ 10ನೇ ತರಗತಿ ಓದುತ್ತಿರುವ ಬಾಲಕ ಚಿತ್ರೀಕರಣ ಮಾಡಿದ್ದಾನೆ. ಹಲವು ದಿನಗಳ ಹಿಂದೆಯೇ ಚಿತ್ರೀಕರಣ ಮಾಡಲಾಗಿತ್ತು. ಭಾನುವಾರ ರಾತ್ರಿ ವಿಷಯ ಬೆಳಕಿಗೆ ಬಂದಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಬಾಲಕನ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದನ್ನು ಖಂಡಿಸಿ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಬಳಿಕ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.