ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ದಿನ 608 ಅರ್ಜಿಗಳ ವಿಲೇವಾರಿ: ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ದಾಖಲೆ

Published 22 ಏಪ್ರಿಲ್ 2024, 15:34 IST
Last Updated 22 ಏಪ್ರಿಲ್ 2024, 15:34 IST
ಅಕ್ಷರ ಗಾತ್ರ

ಬೆಂಗಳೂರು: ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಒಂದು ದಿನದ ಕಲಾಪದ ಅವಧಿಯಲ್ಲಿ ವಿವಿಧ ಪ್ರಕಾರಗಳ 608 ಅರ್ಜಿಗಳನ್ನು ಅದೇ ದಿನವೇ ವಿಲೇವಾರಿ ಮಾಡುವ ಮೂಲಕ ಕರ್ನಾಟಕ ಹೈಕೋರ್ಟ್‌ನಲ್ಲಿ ಹೊಸ ದಾಖಲೆ ಬರೆಯುವತ್ತ ಹೆಜ್ಜೆ ಇಟ್ಟಿದ್ದಾರೆ.

ಹೈಕೋರ್ಟ್‌ನಲ್ಲಿ ಸದ್ಯ ಮತ್ತೊಬ್ಬ ಹಿರಿಯ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಂತೆಯೇ ಕ್ಷಿಪ್ರಗತಿಯ ಅರ್ಜಿಗಳ ವಿಲೇವಾರಿಯಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರೂ ಇದೀಗ ಹೊಸ ದಾಖಲೆ ನಿರ್ಮಿಸಿದ್ದಾರೆ.

ಹೈಕೋರ್ಟ್‌ ಹಾಲ್‌ ಸಂಖ್ಯೆ 23ರಲ್ಲಿನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಬೆಂಗಳೂರು ಪೀಠದಲ್ಲಿ ಸೋಮವಾರ ನಿಗದಿಯಾಗಿದ್ದ ಕಾಸ್‌ ಲಿಸ್ಟ್‌ ಪುಟಗಳ ಸಂಖ್ಯೆಯೇ 127 ಇತ್ತು. ಲಿಸ್ಟ್‌ನಲ್ಲಿ ನಮೂದಾಗಿದ್ದ ಎಲ್ಲಾ 608 ಅರ್ಜಿಗಳನ್ನೂ ದಿನದ ಕಲಾಪದ ಅವಧಿಯಲ್ಲಿ ವಿಲೇವಾರಿ ಮಾಡಿದರು. ಅಂತೆಯೇ, ವಿಚಾರಣೆ ನಡೆಸಿ ಕಾಯ್ದಿರಿಸಲಾಗಿದ್ದ 36 ಅರ್ಜಿಗಳ ಮೇಲಿನ ತೀರ್ಪನ್ನೂ ಪ್ರಕಟಿಸಿದರು.

‘ಹೈಕೋರ್ಟ್‌ನಲ್ಲಿ ಇತರೆ ನ್ಯಾಯಮೂರ್ತಿಗಳ ವಿಲೇವಾರಿ ಪ್ರಮಾಣ ವರ್ಷವೊಂದಕ್ಕೆ ಸರಾಸರಿ 750 ಅರ್ಜಿಗಳಷ್ಟಿದೆ’ ಎಂಬ ಅಂದಾಜಿದ್ದು, ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕಳೆದ 15 ವಾರಗಳಲ್ಲಿ 2 ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಿದ ಹೆಗ್ಗಳಿಕೆ ಹೊಂದಿದ್ದಾರೆ.

ನಾಗಪ್ರಸನ್ನ ಅವರು 2019ರ ನವೆಂಬರ್ 26ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು 2021ರ ಸೆಪ್ಟಂಬರ್ 8ರಂದು ಕಾಯಂಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT