ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2010–12ರ ಅವಧಿಯಲ್ಲಿ ಮಂಡಳಿಯು ಸ್ವಾಧೀನಪಡಿಸಿಕೊಂಡಿದ್ದ ಜಮೀನಿಗೆ 2012ರಲ್ಲೇ ಪರಿಹಾರ ಒದಗಿಸಲಾಗಿತ್ತು. ಆದರೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, 2021–22ನೇ ಆರ್ಥಿಕ ವರ್ಷದಲ್ಲಿ ಹಲವು ಜಮೀನುಗಳಿಗೆ ಎರಡನೇ ಬಾರಿಗೆ ಒಟ್ಟು ₹19.99 ಕೋಟಿ ಪರಿಹಾರ ನೀಡಲಾಗಿತ್ತು. ಈ ಸಂಬಂಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.