ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದಲ್ಲಿ 22 ರೈಲು ಮೇಲು ಸೇತುವೆ ನಿರ್ಮಾಣಕ್ಕೆ ₹784 ಕೋಟಿ: ಕೇಂದ್ರ ಅನುಮೋದನೆ

Published 6 ಜುಲೈ 2023, 13:35 IST
Last Updated 6 ಜುಲೈ 2023, 13:35 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಯ (ಕ್ರಿಪ್‌) ಸೇತುಬಂಧನ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 22 ರೈಲು ಮೇಲು ಸೇತುವೆಗಳನ್ನು ₹784 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ.

ರೈಲು ಲೆವೆಲ್‌ ಕ್ರಾಸಿಂಗ್‌ ಬಳಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ಮೇಲು ಸೇತುವೆಗಳನ್ನು ನಿರ್ಮಿಸಲಾಗುತ್ತದೆ. ರಾಜ್ಯದಲ್ಲಿ ₹997 ಕೋಟಿ ವೆಚ್ಚದಲ್ಲಿ 26 ಮೇಲು ಸೇತುವೆಗಳನ್ನು ನಿರ್ಮಿಸಲು ಅನುಮೋದನೆ ನೀಡುವಂತೆ ಲೋಕೋಪಯೋಗಿ ಇಲಾಖೆಯು ಸಚಿವಾಲಯಕ್ಕೆ ಈ ವರ್ಷದ ಜನವರಿಯಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಸಚಿವಾಲಯವು 22 ಕಾಮಗಾರಿಗಳನ್ನು ನಡೆಸಲು ಅನುಮೋದನೆ ನೀಡಿದೆ. 

ರೈಲು ಮೇಲು ಸೇತುವೆಗಳ ನಿರ್ಮಾಣಕ್ಕೆ ಸಚಿವಾಲಯವು 2022–23ರಲ್ಲಿ ₹47 ಕೋಟಿ ಹಂಚಿಕೆ ಮಾಡಿತ್ತು. 2023–24ನೇ ಸಾಲಿಗೆ ₹94 ಕೋಟಿ ಹಂಚಿಕೆ ಮಾಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT