ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7ನೇ ವೇತನ ಆಯೋಗದ ವರದಿ ಇಂದು ಸಲ್ಲಿಕೆ

Published 16 ಮಾರ್ಚ್ 2024, 0:03 IST
Last Updated 16 ಮಾರ್ಚ್ 2024, 0:03 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ರಚಿಸಲಾಗಿದ್ದ 7ನೇ ವೇತನ ಆಯೋಗದ ಅವಧಿ ಮಾರ್ಚ್‌ 15ಕ್ಕೆ ಮುಕ್ತಾಯವಾಗಿದ್ದು,  ಶನಿವಾರ (ಮಾರ್ಚ್ 16) ಬೆಳಿಗ್ಗೆ 10ಕ್ಕೆ ವರದಿ ಸಲ್ಲಿಸಲಾಗುತ್ತಿದೆ.

ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್ ಅವರ
ಅಧ್ಯಕ್ಷತೆಯಲ್ಲಿ 2022ರ ನವೆಂಬರ್‌ 19ರಂದು 7ನೇ ವೇತನ ಆಯೋಗ ರಚಿಸಲಾಗಿತ್ತು. 6 ತಿಂಗಳು ಗಡುವು ನೀಡಲಾಗಿತ್ತು. ಈ ಅವಧಿಯಲ್ಲಿ ಸರ್ಕಾರ ಶೇ 17ರಷ್ಟು ಮಧ್ಯಂತರ ಪರಿಹಾರ ಘೋಷಿಸಿತ್ತು. ಅದಕ್ಕಾಗಿ ವಾರ್ಷಿಕ ₹10 ಸಾವಿರ ಕೋಟಿ ಹೆಚ್ಚುವರಿ ನೀಡಲಾಗಿತ್ತು.

ಅವಧಿಯನ್ನು 2023 ಮೇ 15ರಿಂದ ನವೆಂಬರ್‌ 18ರವರೆಗೆ ವಿಸ್ತರಿಸಲಾಗಿತ್ತು. ನಂತರ 2ನೇ ಬಾರಿ ಇದೇ ಮಾರ್ಚ್ 15ರವರೆಗೆ ವಿಸ್ತರಿಸಲಾಗಿತ್ತು.

‘ಆಯೋಗದ ಅವಧಿ ಮುಕ್ತಾಯವಾಗಿದ್ದು, ಆಯೋಗ ಅಧ್ಯಕ್ಷ ಮತ್ತು ಸದಸ್ಯರು ಮುಖ್ಯಮಂತ್ರಿಗೆ ವರದಿ ಸಲ್ಲಿಸುತ್ತಿದ್ದಾರೆ. ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡುವ ನಿರೀಕ್ಷೆ ಇದೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT