ಬೆಂಗಳೂರು: ತಾಂತ್ರಿಕ ಶಿಕ್ಷಣ, ಕೃಷಿ ಮಾರಾಟ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆ, ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿಗೆ ಡಿ.20, 21, ಜ.24 ಮತ್ತು ಫೆ.22ರಂದು ಲಿಖಿತ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.

ತಾಂತ್ರಿಕ ಶಿಕ್ಷಣ, ಕೃಷಿ ಮಾರಾಟ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ಡಿಎಲ್, ಕೆಕೆಆರ್ಟಿಸಿ, ಆರ್ಜಿಯುಎಚ್ಎಸ್, ಕೆಎಸ್ಎಸ್ಐಡಿಸಿ, ಶಾಲಾ ಶಿಕ್ಷಣ ಇಲಾಖೆಗಳ ಒಟ್ಟು ಖಾಲಿ ಹುದ್ದೆಗಳಲ್ಲಿ ಹೈದರಾಬಾದ್ ಕರ್ನಾಟಕ (ಎಚ್ಕೆ) ಕೋಟಾಕ್ಕೆ 391, ಹೈದರಾಬಾದ್ ಕರ್ನಾಟಕ ಕೋಟಾ ಹೊರತಾದ ಹುದ್ದೆಗಳು 582 ಇವೆ.

‘ಎಚ್ಕೆ ಹಾಗೂ ಇತರೆ ಕೋಟಾದ ಎರಡೂ ಪರೀಕ್ಷೆಗಳಲ್ಲೂ ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕ ಕಡಿತ ಮಾಡಲಾಗುತ್ತದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.