ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆ.23ರಿಂದ 9-12ನೇ ತರಗತಿ ಆರಂಭ: ಶಾಲೆಗಳಲ್ಲಿ ಸೋಂಕು ಹರಡದಂತೆ ಕ್ರಮ, ಆರ್‌. ಅಶೋಕ

Published : 21 ಆಗಸ್ಟ್ 2021, 9:37 IST
ಫಾಲೋ ಮಾಡಿ
Comments

ಬೆಂಗಳೂರು: ‘ಇದೇ 23ರಿಂದ 9-12ನೇ ತರಗತಿಯವರೆಗೆ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಿದ್ದು, ತರಗತಿಗಳಲ್ಲಿ ಎಷ್ಟು ವಿದ್ಯಾರ್ಥಿಗಳು ಇರಬೇಕೆಂದು ಎಂಬ ಬಗ್ಗೆಯೂ ನಿರ್ಧರಿಸಲಾಗಿದೆ. ಆ ಮೂಲಕ, ಕೊರೊನಾ ಸೋಂಕು ಹರಡದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ಬಿಬಿಎಂಪಿ, ಸರ್ಕಾರಿ‌ ಶಾಲೆ ತೆರೆಯಬೇಕು. ಆದರೆ, ತರಗತಿಯಲ್ಲಿ ಹೆಚ್ಚು ಮಕ್ಕಳು ಇರಬಾರದು ಎಂಬ ಆದೇಶ ಹೊರಡಿಸಲಾಗಿದೆ. ಸದ್ಯಕ್ಕೆ 9-12ನೇ ತರಗತಿಗಳನ್ನು ಆರಂಭಿಸಿ ಪ್ರಾಯೋಗಿಕವಾಗಿ ನೋಡಿಕೊಂಡು, ನಂತರ ಹಂತ ಹಂತವಾಗಿ 7 ಮತ್ತು 8ನೇ ತರಗ ತೆರೆಯಲಾಗುವುದು’ ಎಂದರು.

ಮಾಸ್ಕ್ ವಿಚಾರದಲ್ಲಿ ಮಾರ್ಷಲ್​ಗಳ ಕಿರಿಕಿರಿ ಹಾಗೂ ರಾಜಕಾರಣಿಗಳು ಮಾಸ್ಕ್ ಹಾಕದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ರಾಜಕಾರಣಿಗಳಾಗಲಿ ಅಥವಾ ಅಧಿಕಾರಿಗಳಾಗಲಿ ಎಲ್ಲರೂ ಮಾಸ್ಕ್​ ಹಾಕುವುದು ಕಡ್ಡಾಯ. ಕೋವಿಡ್​ ನಿಯಮ ಉಲ್ಲಂಘಿಸಿದರೆ ದಂಡ ಕಟ್ಟಬೇಕಾಗುತ್ತದೆ. ದೆಹಲಿಯಲ್ಲಿ‌ ₹ 5 ಸಾವಿರದಂಡ ಹಾಕಲಾಗುತ್ತದೆ. ಮಾಸ್ಕ್ ಹಾಕದವರಿಗೆ ದಂಡ ನಮ್ಮಲ್ಲಿಯೇ ಕಡಿಮೆ ಇದೆ. ನಿಯಮಗಳನ್ನು ಎಲ್ಲರೂ ಪಾಲಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT