ವಿಜಯಪುರ: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಈಗ ಆಮ್ ಆದ್ಮಿ ಪಾರ್ಟಿ ಜತೆಗೆ ಸಮ್ಮಿಲನಕ್ಕೆ ಮುಂದಾಗಿದೆ ಎಂದು ಪಕ್ಷದ ಜಿಲ್ಲಾ ಉಸ್ತುವಾರಿ ಬಿ.ಕೆ.ಶಿವಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.21ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ರೈತರ ಹಕ್ಕೊತ್ತಾಯ ಸಮಾವೇಶದಲ್ಲಿ ರೈತ ಸಂಘ ಮತ್ತು ಆಮ್ ಆದ್ಮಿ ಪಾರ್ಟಿ ಮೈತ್ರಿಗೆ ಉತ್ತಮ ವೇದಿಕೆಯಾಗಲಿದೆ ಎಂದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪಾಲ್ಗೊಳ್ಳಲಿದ್ದಾರೆ. ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕೂಡ ಪಾಲ್ಗೊಳ್ಳಲಿದ್ದಾರೆ ಎಂದರು.

ಗೋದಾವರಿ - ಪೆನ್ನಾರ್ ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕದ ಪಾಲು ನೀಡಿ ನಂತರ ಆಂಧ್ರಪ್ರದೇಶ, ತಮಿಳುನಾಡಿಗೆ ನೀರು ಕೊಡಬೇಕು. ರಾಜ್ಯದಲ್ಲಿ ಕೃಷಿ ಕಾಯಿದೆ ವಾಪಸ್ ಪಡೆಯಬೇಕು. ಕಲ್ಲುಗಣಿಗಾರಿಕೆ ನಿಯಂತ್ರಿಸಬೇಕು. ಅರ್ಹ ಫಲಾನುಭವಿ ರೈತರಿಗೆ ಸಾಗುವಳಿ ಚೀಟಿ ತಡ ಮಾಡದೆ ಕೊಡಬೇಕು. ರೈತರಿಗೆ ವಿದ್ಯುತ್ ಸಮಸ್ಯೆ ಬೇಡಿಕೆ ಈಡೇರಿಕೆಗೆ ಸಂಬಂಧಿಸಿದಂತೆ ಸಮಾವೇಶದಲ್ಲಿ ಹಕ್ಕೊತ್ತಾಯಗಳನ್ನು ರೈತ ಸಂಘದ ಮುಖಂಡರು ಮಂಡಿಸಲಿದ್ದಾರೆ ಎಂದರು.

ಆಮ್ ಆದ್ಮಿ ಪಕ್ಷದ ಜಯಕುಮಾರ್, ವೆಂಕಟೇನಹಳ್ಳಿ ದೇವರಾಜು, ಜಾಲಿಗೆ ವೆಂಕಟೇಶ್, ನರಸಿಂಹ ಮೂರ್ತಿ, ಮುರಳಿ, ವೀರಣ್ಣ, ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.