ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಶಾಲೆಗಳಿಗೆ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯಲ್ಲಿ ಶೇ 97ರಷ್ಟು ಫಲಿತಾಂಶ ಬಂದಿದೆ.

ಇಲಾಖೆ ನಡೆಸುತ್ತಿರುವ 29 ಶಾಲೆಗಳಲ್ಲಿ, 21 ಶಾಲೆಗಳು ಶೇ 100 ಫಲಿತಾಂಶ ಪಡೆದಿವೆ. ಬೆಂಗಳೂರು ಪ್ರದೇಶದಲ್ಲಿ 12ನೇ ಸ್ಥಾನ ಪಡೆದಿವೆ. ಪರೀಕ್ಷೆಗೆ ಕುಳಿತ 1,348 ವಿದ್ಯಾರ್ಥಿಗಳಲ್ಲಿ 1,304 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

‘ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಶಾಲೆಗಳು ಮಾತ್ರ ಸಿಬಿಎಸ್ಇ ಪಠ್ಯಕ್ರಮ ಅನುಸರಿಸುತ್ತಿದ್ದು, ಅಲ್ಲಿನ ಮಕ್ಕಳಿಗೆ ಖಾಸಗಿ ಶಾಲೆಗಳ ಜತೆ ಪೈಪೋಟಿ ನಡೆಸುವಷ್ಟು ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಅದರ ಫಲವಾಗಿ ಉತ್ತಮ ಫಲಿತಾಂಶ ಸಿಕ್ಕಿದೆ. ನೀಟ್, ಜೆಇಇ ಮೊದಲಾದ ಪರೀಕ್ಷೆಗಳಿಗೂ ವಸತಿ ಶಾಲೆಗಳಲ್ಲಿ ತರಬೇತಿ ನೀಡಲಾಗುತ್ತಿದೆ’ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ಸಿ.ಆರ್.ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.