ಮಂಗಳೂರು: ಬಂಟ್ವಾಳ ತಾಲ್ಲೂಕಿನ ಇರಾ ಕೋಡಿ ಎಂಬಲ್ಲಿ ಹತ್ಯೆಗೊಳಗಾದ ಅಬ್ದುಲ್ ರಹೀಂ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು. ಅಂತಿಮ ಯಾತ್ರೆಯ ಸಾಗುವ ವೇಳೆ ಫರಂಗಿಪೇಟೆ ಹಾಗೂ ಬಿ.ಸಿ.ರೋಡ್ನಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿತ್ತು.

ಉಳ್ಳಾಲ ತಾಲ್ಲೂಕಿನ ಕುತ್ತಾರಿನಿಂದ ಹೊರಟ ಅಂತಿಮಯಾತ್ರೆಯು ಮಂಗಳೂರಿನ ನಂತೂರು, ಪಡೀಲ್ ಅಡ್ಯಾರ್ ಅರ್ಕುಳ, ಫರಂಗಿಪೇಟೆ, ಬಿ.ಸಿ.ರೋಡ್ ಮಾರ್ಗವಾಗಿ ಸಾಗಿತು.

ಅಂಗಡಿಗಳು ಬಂದ್:

ರಹೀಂ ಅವರ ಪಾರ್ಥಿವ ಶರೀರವನ್ನು ಹೊತ್ತ ಆಂಬುಲೆನ್ಸ್ ಫರಂಗಿಪೇಟೆಯ ಬಳಿ ಸಾಗುತ್ತಿದ್ದಂತೆಯೇ ಅಲ್ಲಿ ಸೇರಿದ್ದವರು ಅಂತಿಮ ನಮನ ಸಲ್ಲಿಸಿದರು. ಫರಂಗಿಪೇಟೆಯ ಬಹುತೇಕ ಅಂಗಡಿಗಳು ಮುಚ್ಚಿದ್ದವು. ಬಿ.ಸಿ.ರೋಡ್ನ ಮಿತ್ತಬೈಲ್ ಜುಮ್ಮಾ ಮಸೀದಿ ಬಳಿ ತಲುಪುವಾಗ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು. ಬಿ.ಸಿ.ರೋಡ್ನಲ್ಲೂ ಬಹುತೇಕ ಅಂಗಡಿ ಮಳಿಗೆಗಳು ಮುಚ್ಚಿದ್ದವು. ತೆರೆದಿದ್ದ ಕೆಲವು ಮಳಿಗೆಗಳನ್ನು ಕೆಲವು ಆಕ್ರೋಶಿತ ಯುವಕರು ಬಲವಂತದಿಂದ ಮುಚ್ಚಿಸಿದರು. ಕೆಲಕಾಲ ರಸ್ತೆ ತಡೆ ನಡೆಸಿದರು.

ಫರಂಗಿಪೇಟೆ ಹಾಗೂ ಬಿ.ಸಿ.ರೋಡ್ನಲ್ಲಿ ಅಂತಿಮಯಾತ್ರೆ ಸಾಗುವಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್ ಮತ್ತು ಮಂಗಳೂರು ನಡುವೆ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ರಹೀಂ ಊರಾದ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಅವರ ಮನೆಗ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಗುತ್ತಿದೆ. ಅಲ್ಲಿನ ಮಸೀದಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ.

ಸುರತ್ಕಲ್–ಬಸ್ಗೆ ಕಲ್ಲು:

ಮಂಗಳೂರಿನಲ್ಲಿ ಕೆಲವು ಸಿಟಿಬಸ್ಗಳು ಸಂಚಾರ ಸ್ಥಗಿತಗೊಳಿಸಿವೆ. ಸುರತ್ಕಲ್ ಮಂಗಳೂರು ಸುರತ್ಕಲ್, ಮುಕ್ಕ ಹಳೆಯಂಗಡಿ, ಕಿನ್ನಿಗೋಳಿ ಮಾರ್ಗವಾಗಿ ಕಟೀಲಿಗೆ ಸಂಚರಿಸುವ ನಂದಿನಿ ಬಸ್ಗೆ ಸುರತ್ಕಲ್ನಲ್ಲಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಆ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಪ್ರಯಾಣಿಕರು ಬೇರೆ ಬಸ್ನಲ್ಲಿ ತೆರಳಿದರು. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
.ರಹೀಂ ಹತ್ಯೆ ಪ್ರಕರಣ: ಕೊಳತ್ತಮಜಲುವಿನತ್ತ ಪಾರ್ಥಿವ ಶರೀರ.ಮಂಗಳೂರು: ಬಂಟ್ವಾಳದಲ್ಲಿ ಕೊಲೆಯಾದ ಅಬ್ದುಲ್ ರಹೀಂ ಮೃತದೇಹ ದೇರಳಕಟ್ಟೆಗೆ.ಬಂಟ್ವಾಳ ಸಮೀಪದ ಇರಾಕೋಡಿ ಬಳಿ ರಹೀಂ ಎಂಬ ಯುವಕನ ಹತ್ಯೆ.ದ.ಕ. ಬಂದ್: ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.