ಬೆಳಗಾವಿ: ವಿಜಯಪುರದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಅಭಿನವ ಶಿವಪುತ್ರ ಸ್ವಾಮೀಜಿ (64) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಲಿಂಗೈಕ್ಯರಾದರು.

‘ಅನಾರೋಗ್ಯದಿಂದಾಗಿ ಅವರು ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಇಲ್ಲಿನ ಕೆಎಲ್‌ಇ ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಲಿಂಗೈಕ್ಯರಾದರು’ ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿ ತಿಳಿಸಿದ್ದಾರೆ.

ಶ್ರೀಗಳ ಸಮಾಧಿಕ್ರಿಯೆ ಶನಿವಾರ (ಆ.8) ಮಧ್ಯಾಹ್ನ 3ಕ್ಕೆ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಬಳಿಯ ಶಾಂತಾಶ್ರಮದ ಆವರಣದಲ್ಲಿ ನೆರವೇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂತಾಪ: ಶ್ರೀಗಳ ನಿಧನಕ್ಕೆ ಇಂಚಲದ ಸಾಧು ಸಂಸ್ಥಾನಮಠದಶಿವಾನಂದ ಭಾರತಿ ಸ್ವಾಮೀಜಿ, ಬೀದರ್‌ನ ಶಿವಕುಮಾರ ಸ್ವಾಮೀಜಿ, ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.