ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಪೊಲೀಸರು ಗುಂಪನ್ನು ಚದುರಿಸಿ, ಕಾರ್ಯಕರ್ತರ ಯತ್ನವನ್ನು ವಿಫಲಗೊಳಿಸಿದರು.

ಅತಿಥಿ ಉಪನ್ಯಾಸಕರ ನೇಮಕ ಮಾಡದೆ ಸರ್ಕಾರ ಬೇಜವಾಬ್ದಾರಿ ತೋರುತ್ತಿದೆ. ಅನಗತ್ಯ ವಿಳಂಬ ಮಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆಯಾಗಿದೆ. ಅವರ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ. ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನೇ ನಂಬಿಕೊಂಡು ಪ್ರವೇಶ ಪಡೆದ ಬಡ, ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಇಲ್ಲವಾದರೆ ಸಚಿವ ಎಂ.ಸಿ.ಸುಧಾಕರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಸಂಜಯ್ ನಗರದಲ್ಲಿರುವ ಸಚಿವರ ಮನೆಯ ಮುಂದೆ ಧರಣಿ ಕುಳಿತ ಎಬಿವಿಪಿ ಕಾರ್ಯಕರ್ತರನ್ನು ಸ್ವಾತಂತ್ರ್ಯ ಉದ್ಯಾನದ ಬಳಿ ಪ್ರತಿಭಟನೆ ನಡೆಸುವಂತೆ ಮನವೊಲಿಸಿದರು. ಒಪ್ಪದೇ ಇದ್ದಾಗ, ಅವರನ್ನು ವಶಕ್ಕೆ ಪಡೆದ ಪೊಲೀಸರು ನಂತರ ಬಿಡುಗಡೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.