ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆ ಪ್ರಶ್ನಿಸಿರುವ ಅರ್ಜಿಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸರ್ಕಾರದ ಪರ ವಾದ ಮಂಡಿಸಲು ನೇಮಕಗೊಂಡಿದ್ದ ಎ.ಎಸ್. ಪೊನ್ನಣ್ಣ ತಮ್ಮ ವಿಶೇಷ ವಕೀಲ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಪತ್ರವನ್ನು ಮಂಗಳವಾರ (ಜು.30) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕಳುಹಿಸಿದ್ದಾರೆ.

ಲೆಕ್ಕ ಪರಿಶೋಧಕರೂ ಆದ ವಕೀಲ ಬಿ.ಜಿ.ಚಿದಾನಂದ ಅರಸ್, ಹಾಗೂ ಬೆಂಗಳೂರು ವಕೀಲರ ಸಂಘ ಸೇರಿದಂತೆ 10ಕ್ಕೂ ಜನರು ಎಸಿಬಿ ರಚನೆ ಪ್ರಶ್ನಿಸಿ 2016ರಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣಗಳಲ್ಲಿ ಪೊನ್ನಣ್ಣ ಅವರನ್ನು ರಾಜ್ಯ ಸರ್ಕಾರ 2017ರ ಜೂನ್ 24ರಂದು ವಿಶೇಷ ವಕೀಲರಾಗಿ ನೇಮಕ ಮಾಡಿ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.