ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಕನ್ನಡ: ಅರಣ್ಯಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ದೂರು ಹಿನ್ನೆಲೆ
Last Updated 20 ಜುಲೈ 2018, 6:33 IST
ಅಕ್ಷರ ಗಾತ್ರ

ಕಾರವಾರ: ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಅರಣ್ಯಾಧಿಕಾರಿ ಮನೆ ಮೇಲೆ ಎಸಿಬಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿಯ ಅರಣ್ಯಾಧಿಕಾರಿ ಚಂದ್ರಕಾಂತ ನಾಯ್ಕ ಅವರ ಮನೆ ಮೇಲೆ ಮಂಗಳೂರಿನ ಎಸಿಬಿ ಡಿವೈಎಸ್ ಪಿ ಸುದೀರ್ ಹೆಗಡೆ ನೇತ್ರತ್ವದಲ್ಲಿ ದಾಳಿ ನಡೆದಿದೆ‌.

ಚಂದ್ರಕಾಂತ ನಾಯ್ಕ ಅವರ ಅಂಕೋಲ ತಾಲೂಕಿನ ಆವರ್ಸಾದಲ್ಲಿನ ಮೂಲ ಮನೆ, ಕಾರವಾರ ತಾಲೂಕಿನ ನಂದನಗದ್ದದಲ್ಲಿರುವ ಬಾಡಿಗೆ ಮನೆ, ಕಿರುವತ್ತಿಯಲ್ಲಿರುವ ಕಚೇರಿ ಮೇಲೆ ಏಕ ಕಾಲದಲ್ಲಿ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಲಾಗಿದೆ.

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ಕುರಿತು ವ್ಯಕ್ತಿಯೊಬ್ಬರ ದೂರಿನ ಆಧಾರದ ಮೇಲೆ ದಾಳಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT