ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾರಿ ಡಿಕ್ಕಿ : ಶಿಲಾ ಮಂಟಪ ಕುಸಿಯುವ ಆತಂಕ

Last Updated 15 ಅಕ್ಟೋಬರ್ 2019, 20:08 IST
ಅಕ್ಷರ ಗಾತ್ರ

ಬಾದಾಮಿ: ಸಮೀಪದ ಬನಶಂಕರಿ ದೇವಾಲಯದ ದಕ್ಷಿಣ ದಿಕ್ಕಿನಲ್ಲಿರುವ ಶಿಲಾ ಮಂಟಪಕ್ಕೆ ಮಂಗಳವಾರ ಬೆಳಗಿನ ಜಾವ 18 ಚಕ್ರಗಳ ಲಾರಿ ಡಿಕ್ಕಿ ಹೊಡೆದಿದ್ದು, ಮುಂದಿನ ಸಾಲಿನ ಕಂಬವು ಸರಿದಿದೆ. ಮಂಟಪದ ಇತರ ಕಂಬಗಳೂ ಸಡಿಲಗೊಂಡಿವೆ.

ಲಾರಿ ಜರುಗಿಸಿದರೆ ಶಿಲಾಮಂಟಪ ಕುಸಿಯುವ ಆತಂಕವೂ ಇದೆ ಎಂದು ಭಾರತೀಯ ಪುರಾತತ್ವ ಇಲಾಖೆ ತಿಳಿಸಿದೆ.ಸದ್ಯ ಈ ಮಾರ್ಗದಲ್ಲಿ ಸಂಚಾರ ಸ್ಥಗಿತವಾಗಿದ್ದು, ಹರಿದ್ರಾತೀರ್ಥ ಹೊಂಡದ ಪಕ್ಕದ ರಸ್ತೆಯನ್ನು ಸಂಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ.

ಎರಡು ದಶಕಗಳ ಹಿಂದೆಯೂ ಶಿಲಾ ಮಂಟಪಕ್ಕೆ ವಾಹನ ಡಿಕ್ಕಿ ಹೊಡೆದಿತ್ತು. ಆಗ ಜಖಂ ಆಗಿದ್ದ ಮಂಟಪವನ್ನು ಭಾರತೀಯ ಪುರಾತತ್ವ ಇಲಾಖೆಯು ದುರಸ್ತಿ ಮಾಡಿ, ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿತ್ತು.

ಧಾರವಾಡದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇಲಾಖೆಯ ಅಧಿಕಾರಿಗಳು ಮತ್ತು ಎಂಜಿನಿಯರ್ ಬಂದ ಬಳಿಕ ಲಾರಿಯನ್ನು ತೆಗೆಯುವ ನಿರ್ಧಾರ ಮಾಡಲಾಗುವುದು ಎಂದು ಇಲ್ಲಿಯ ಪುರಾತತ್ವ ಇಲಾಖೆಯ ಅಧಿಕಾರಿಗಳಾದ ಅಜಯ ಜನಾರ್ಧನ ಹಾಗೂ ಪ್ರಶಾಂತ ಕುಲಕರ್ಣಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT