ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ‌ ದೌರ್ಜನ್ಯ ಆರೋಪ: ಪ್ರಕರಣದ ತನಿಖೆ CID ಹೆಗಲಿಗೆ

Published 23 ಜೂನ್ 2024, 6:40 IST
Last Updated 23 ಜೂನ್ 2024, 6:40 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣದ ವಿಚಾರಣೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿಲಾಗಿದೆ.

ತನಿಖಾಧಿಕಾರಿಯಾಗಿರುವ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕು‌ಮಾರ್, ಸೂರಜ್ ಅವರನ್ನು ಬಂಧಿಸಿ, ಶನಿವಾರ ರಾತ್ರಿ 7.30 ರ ಹೊತ್ತಿಗೆ ಹಾಸನದ ಸಿಇಎನ್ ಪೊಲೀಸ್ ಠಾಣೆಗೆ ಕರೆತಂದಿದ್ದರು. ಸಂತ್ರಸ್ತ ನೀಡಿರುವ ದೂರು ಹಾಗೂ ಸೂರಜ್ ಆಪ್ತ ನೀಡಿರುವ ದೂರುಗಳ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.

ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದ ಪೊಲೀಸರು ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT