ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರನಗರಿ ನಿರ್ಮಾಣಕ್ಕೆ ಕ್ರಮ: ಸಿ.ಎಂ. ಸಿದ್ದರಾಮಯ್ಯ ಭರವಸೆ

ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ
Published 1 ಜುಲೈ 2024, 1:24 IST
Last Updated 1 ಜುಲೈ 2024, 1:24 IST
ಅಕ್ಷರ ಗಾತ್ರ

ಬೆಂಗಳೂರು: ‘ವರನಟ ರಾಜ್‌ಕುಮಾರ್ ಅವರ ‘ಚಿತ್ರನಗರಿ’ ಕನಸನ್ನು ನನಸಾಗಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಮೈಸೂರಿನಲ್ಲಿ ನೂರು ಎಕರೆಗೂ ಹೆಚ್ಚು ಜಮೀನು ಒದಗಿಸಿದ್ದು, ಸರ್ಕಾರಿ–ಖಾಸಗಿ ಸಹಭಾಗಿತ್ವದಲ್ಲಿ(ಪಿಪಿಪಿ) ಈ ಯೋಜನೆ ಪೂರ್ಣಗೊಳಿಸುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ನಗರದಲ್ಲಿ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

‘ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ. ಚಲನಚಿತ್ರ ನಿರ್ಮಾಪಕರಿಗೆ ಇಲ್ಲಿಯವರೆಗೆ ಸ್ವಂತ ಕಟ್ಟಡ ಇರಲಿಲ್ಲ. ಸ್ವಂತ ಕಟ್ಟಡ ನಿರ್ಮಾಣವಾಗಿದ್ದು, ಅದರ ಉದ್ಘಾಟನೆಯನ್ನು ನೆರವೇರಿಸಲು ಸಂತೋಷವಾಗುತ್ತಿದೆ‘ ಎಂದರು.

‘ಸಂಘ ಈತನಕ ಯಾವುದೇ ಆರ್ಥಿಕ ಸಹಾಯವನ್ನು ಕೇಳಿಲ್ಲ. ಆದರೆ ಸರ್ಕಾರ ಸಂಘದ ಬೆಳವಣಿಗೆಗೆ ಅಗತ್ಯ ಆರ್ಥಿಕ ಸಹಾಯ ಮಾಡಿಯೇ ಮಾಡುತ್ತದೆ. ಸರ್ಕಾರದ ವತಿಯಿಂದ ಕನ್ನಡದಲ್ಲಿ ಒಟಿಟಿ ವೇದಿಕೆ ನಿರ್ಮಿಸಲು ಬೇಡಿಕೆಯಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ. ಕನ್ನಡ ಚಿತ್ರಗಳಿಗೆ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ’ ಎಂದು ಅವರು ತಿಳಿಸಿದರು.

ನಟರಾದ ಶಿವರಾಜ್‌ಕುಮಾರ್‌, ಜಗ್ಗೇಶ್‌, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ನಟ ಶಿವರಾಜ್‌ಕುಮಾರ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ.
ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ನಟ ಶಿವರಾಜ್‌ಕುಮಾರ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT