ರೇಣುಕಸ್ವಾಮಿ ಕೊಲೆಗೂ ಮುನ್ನ ಆರೋಪಿ ವಿನಯ್ ಅವರ ರಾಜರಾಜೇಶ್ವರಿ ನಗರದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಆರೋಪಿಗಳು ಪಾರ್ಟಿ ನಡೆಸಿದ್ದರು. ಆ ಪಾರ್ಟಿಯಲ್ಲಿ ಆರೋಪಿ ದರ್ಶನ್, ಪವಿತ್ರಾಗೌಡ ಜತೆಗೆ ನಟ ಚಿಕ್ಕಣ್ಣ ಕಾಣಿಸಿಕೊಂಡಿದ್ದರು. ಚಿಕ್ಕಣ್ಣ ಅವರಿಗೆ ನೋಟಿಸ್ ನೀಡಿದ್ದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದರು. ಅಲ್ಲದೇ, ಚಿಕ್ಕಣ್ಣ ಅವರನ್ನು ಈ ಪ್ರಕರಣದಲ್ಲಿ ಸಾಕ್ಷಿದಾರರನ್ನಾಗಿ ಪರಿಗಣಿಸಿ ನ್ಯಾಯಾಧೀಶರ ಎದುರು ಸಿಆರ್‌ಪಿಸಿ ಕಲಂ 164ರ ಅಡಿ ಹೇಳಿಕೆ ದಾಖಲಿಸಲಾಗಿತ್ತು.