ಬೆಂಗಳೂರು: ‘ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕುರಿತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೊತೆ ಚರ್ಚಿಸಲಾಗುವುದು’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ಹೇಳಿದರು.

ನಟ ಅಂಬರೀಷ್ ಸ್ಮಾರಕ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ನೇತೃತ್ವದಲ್ಲಿ ಚಿತ್ರರಂಗದ ಮುಖಂಡರ ಜೊತೆಗೆ ವಿಧಾನಸೌಧದಲ್ಲಿ ಸೋಮವಾರ ನಡೆಯಬೇಕಿದ್ದ ಸಭೆಗೆ ಬಂದಿದ್ದ ಅವರು, ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಸಭೆಗೆ ಸಚಿವೆ ಜಯಮಾಲ, ನಿರ್ಮಾಪಕರಾದ ರಾಕ್‌ಲೈನ್ ವೆಂಕಟೇಶ್, ಸಾ.ರಾ. ಗೋವಿಂದು, ಭಾ.ಮಾ. ಹರೀಶ್ ಸೇರಿದಂತೆ ಚಿತ್ರರಂಗದ ಪ್ರಮುಖರು ಸಭೆಗೆ ಬಂದಿದ್ದರು. ಆದರೆ, ಮುಖ್ಯಮಂತ್ರಿಗೆ ಸಮಯಾವಕಾಶ ಇಲ್ಲದಿದ್ದುದರಿಂದ ಸಭೆ ಮುಂದೂಡಲಾಯಿತು.

‘ನಾನು 2016ರಲ್ಲಿ ವಾಣಿಜ್ಯ ಮಂಡಳಿ ಅಧ್ಯಕ್ಷನಾಗಿದ್ದಾಗ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವಂತೆ ಭಾರತಿ ವಿಷ್ಣುವರ್ಧನ್ ನನಗೆ ಪತ್ರ ಬರೆದಿ ದ್ದರು. ಈ ವಿಷಯವನ್ನೂ ಮುಖ್ಯಮಂತ್ರಿ ಮುಂದೆ ಪ್ರಸ್ತಾಪಿಸುತ್ತೇನೆ’ ಎಂದರು.

‘ವಿಷ್ಣು ಅಂತ್ಯಸಂಸ್ಕಾರ ಎಲ್ಲಿ ನಡೆಯಿತೊ ಅಲ್ಲೇ ಸ್ಮಾರಕ ನಿರ್ಮಾಣ ಆಗಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ಈ ವಿಷಯದಲ್ಲಿ ಭಾರತಿ ವಿಷ್ಣುವರ್ಧನ್ ಮತ್ತು ವಿಷ್ಣು ಅಭಿಮಾನಿಗಳು ಒಮ್ಮತದ ನಿರ್ಧಾರ ತೆಗೆದುಕೊಳ್ಳಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.