ಬೆಂಗಳೂರು: ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಸ್ಯಾಂಡಲ್ವುಡ್ ನಟಿ ಹರ್ಷವರ್ಧನಿ ರನ್ಯಾ (ರನ್ಯಾ ರಾವ್) ಅವರು ಒಂದು ವರ್ಷದ ಬಳಿಕ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬುಧವಾರ ಬಿಡುಗಡೆಯಾದರು. ಜೈಲಿನಿಂದ ಬಿಡುಗಡೆಯಾದ ಬಳಿಕ ರನ್ಯಾ ಅವರು ವಕೀಲರ ಕಾರಿನಲ್ಲಿ ತೆರಳಿದರು.

ದುಬೈನಿಂದ 14.2 ಕೆ.ಜಿ ಚಿನ್ನವನ್ನು ಕಳ್ಳ ಸಾಗಣೆ ಮಾಡಿದ್ದ ಆರೋಪದಡಿ ಮಾರ್ಚ್ 3ರಂದು ಡಿಆರ್ಐ ಅಧಿಕಾರಿಗಳು ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ರಾವ್ ಅವರನ್ನು ಬಂಧಿಸಿದ್ದರು. ಚಿನ್ನ ಸಾಗಣೆ, ಮಾರಾಟಕ್ಕೆ ನೆರವು ನೀಡಿದ್ದ ಆರೋಪದ ಮೇರೆಗೆ ರನ್ಯಾ ಸಹಚರರಾದ ತರುಣ್ ರಾಜ್ ಕುಂಡೂರು ಹಾಗೂ ಸಾಹಿಲ್ ಜೈನ್ ಅವರನ್ನು ಬಂಧಿಸಲಾಗಿತ್ತು.

ರನ್ಯಾ ರಾವ್, ತರುಣ್ ಕೊಂಡೂರು ರಾಜ್ಗೆ ನಗರದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು 2025ರ ಮೇ 20ರಂದು ಜಾಮೀನು ಮಂಜೂರು ಮಾಡಿತ್ತು. ಇದಕ್ಕೂ ಮುನ್ನ ಅಂದರೆ ಏಪ್ರಿಲ್ 22ರಂದು ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯ(ಕಾಫಿಫೋಸಾ) 3(1) ಸೆಕ್ಷನ್ ಅಡಿಯಲ್ಲಿ ರನ್ಯಾ ವಿರುದ್ಧ ಬಂಧನದ ಆದೇಶ ಹೊರಡಿಸಲಾಗಿತ್ತು. ಕಾಫಿಫೋಸಾ ಪ್ರಕರಣದಲ್ಲಿ ಬಂಧನವಾದರೆ, ಒಂದು ವರ್ಷ ಜೈಲಿನಿಂದ ಬಿಡುಗಡೆ ಆಗುವಂತೆ ಇಲ್ಲ. ಹೀಗಾಗಿ, ಜಾಮೀನು ಲಭಿಸಿದ್ದರೂ ರನ್ಯಾ ಕಾರಾಗೃಹದಲ್ಲೇ ಇದ್ದರು.

‘ಕಾಫಿಫೋಸಾದಡಿ ಆದೇಶ ಹೊರಡಿಸಿ ಬುಧವಾರಕ್ಕೆ ಒಂದು ವರ್ಷವಾಗಿದ್ದು, ಈ ಹಿಂದೆಯೇ ಲಭಿಸಿದ ಜಾಮೀನಿನ ಮೇಲೆ ರನ್ಯಾ ಬಿಡುಗಡೆ ಆಗಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ಮೇಲ್ಮನವಿ ಸಲ್ಲಿಸುತ್ತಿಲ್ಲ’ ಎಂದು ಡಿಆರ್ಐ ಮೂಲಗಳು ತಿಳಿಸಿವೆ.

ತರುಣ್ ರಾಜ್ ಕುಂಡೂರು ಹಾಗೂ ಸಾಹಿಲ್ ಜೈನ್ ಅವರಿಗೂ ಜಾಮೀನು ಲಭಿಸಿದ್ದು ಸದ್ಯದಲ್ಲೇ ಅವರು ಬಿಡುಗಡೆ ಆಗಲಿದ್ದಾರೆ ಎಂದು ಮೂಲಗಳು ಹೇಳಿವೆ.

ದೋಷಾರೋಪ ಪಟ್ಟಿ ಸಲ್ಲಿಸಿದ್ದ ಇ.ಡಿ:

‘ಅಕ್ರಮ ಹಣ ವರ್ಗಾವಣೆ (ತಡೆ) ಕಾಯ್ದೆಯ (ಪಿಎಂಎಲ್ಎ) ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಕ್ಕೆ ಕಳೆದ ಫೆಬ್ರುವರಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ರನ್ಯಾ ರಾವ್, ಸಹಚರರು ಒಂದು ವರ್ಷದಲ್ಲಿ ₹102.55 ಕೋಟಿ ಮೌಲ್ಯದ 127 ಕೆ.ಜಿ ಚಿನ್ನವನ್ನು ಕಳ್ಳ ಸಾಗಣೆ ಮಾಡಿದ್ದಾರೆಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದು ಇ.ಡಿ ಮೂಲಗಳು ತಿಳಿಸಿವೆ.

ನಗರದ ಲ್ಯಾವೆಲ್ಲೆ ರಸ್ತೆಯ ನಂದವಾಣಿ ಮ್ಯಾನ್ಶನ್ ಫ್ಲ್ಯಾಟ್ ಮೇಲೂ ಡಿಆರ್ಐ ಅಧಿಕಾರಿಗಳು ಈ ಹಿಂದೆ ದಾಳಿ ನಡೆಸಿ, ನಗದು ಹಾಗೂ ದಾಖಲೆಗಳನ್ನು ಜಪ್ತಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.