ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ: ಆರೋಗ್ಯ ಇಲಾಖೆ ಘೋಷಣೆ

Published 19 ಫೆಬ್ರುವರಿ 2024, 20:41 IST
Last Updated 19 ಫೆಬ್ರುವರಿ 2024, 20:41 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಇಲಾಖೆಯು ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತವನ್ನೂ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ.

ಭಾರತದಲ್ಲಿ ಉಂಟಾಗುವ ಹಾವು ಕಡಿತವನ್ನು ವಿಶ್ವ ಆರೋಗ್ಯ ಸಂಸ್ಥೆಯು ‘ಉಷ್ಣವಲಯದ ನಿರ್ಲಕ್ಷಿತ ರೋಗಗಳು’ ಎಂದು ವರ್ಗೀಕರಿಸಿದೆ. ಹೀಗಾಗಿ, ಕರ್ನಾಟಕದಲ್ಲಿ 2023–24ರ ಸಾಲಿನಲ್ಲಿ ಹಾವು ಕಡಿತ ತಡೆಗಟ್ಟುವ ಕಾರ್ಯಕ್ರಮ ಆರಂಭಿಸಲಾಗಿದೆ.

ಹಾವು ಕಡಿತ ಚಿಕಿತ್ಸೆಗೆ ಒಳರೋಗಿ, ಹೊರರೋಗಿಯಾಗಿ ದಾಖಲಾದವರು, ಮರಣ ಉಂಟಾದ ಪ್ರಕರಣಗಳು ಸಹಿತ ಎಲ್ಲ ಮಾಹಿತಿಗಳನ್ನು ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ವಿಜ್ಞಾನ ಸಂಸ್ಥೆಗಳು ಕಡ್ಡಾಯವಾಗಿ ಭಾರತ ಸರ್ಕಾರದ ಸಮಗ್ರ ಆರೋಗ್ಯ ಮಾಹಿತಿ ವೇದಿಕೆ (Integrated Health Information Platform) ಇದರಲ್ಲಿ ದಾಖಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT