ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾತ್ರಿ ಪ್ರಯುಕ್ತ KSRTCಯಿಂದ ಹೆಚ್ಚುವರಿ ಬಸ್‌

ವಾರಾಂತ್ಯಕ್ಕೆ ಹೊಂದಿಕೊಂಡು ಶಿವರಾತ್ರಿ ಬಂದಿರುವುದರಿಂದ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ ಒಮ್ಮೆಲೇ ಹೆಚ್ಚಳವಾಗಲಿದೆ
Published 4 ಮಾರ್ಚ್ 2024, 15:33 IST
Last Updated 5 ಮಾರ್ಚ್ 2024, 5:25 IST
ಅಕ್ಷರ ಗಾತ್ರ

ಬೆಂಗಳೂರು: ವಾರಾಂತ್ಯಕ್ಕೆ ಹೊಂದಿಕೊಂಡು ಶಿವರಾತ್ರಿ ಬಂದಿರುವುದರಿಂದ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ ಒಮ್ಮೆಲೇ ಹೆಚ್ಚಳವಾಗಲಿದೆ. ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಕೆಎಸ್‌ಆರ್‌ಟಿಸಿ 1,500 ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಫೆ.7ರಿಂದ 11ರ ವರೆಗೆ ಈ ವಿಶೇಷ ಸಾರಿಗೆ ಇರಲಿದೆ.

ಶುಕ್ರವಾರ (ಫೆ.8) ಶಿವರಾತ್ರಿ ಬಂದಿದ್ದು, ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಫೆ.7ರಿಂದ 10ರವರೆಗೆ ಹೊರಡಲಿವೆ. ಫೆ.10 ಮತ್ತು 11ರಂದು ವಿವಿಧ ಕಡೆಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ಗಳು ವಾಪಸ್ ಆಗಲಿವೆ.

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮದುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. www.ksrtc.karnataka.gov.in ವೆಬ್‌ಸೈಟ್ ಮೂಲಕ ಇ-ಟಿಕೆಟ್ ಬುಕಿಂಗ್‍ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ 5 ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ‍್ರಯಾಣದ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ಸಾಗುವ ದರದಲ್ಲಿ ಶೇ 10 ರಿಯಾಯಿತಿ ದೊರೆಯಲಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT