ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಿರುವ ಸಿಐಡಿ ಅಧಿಕಾರಿಗಳು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಕರೆತಂದಿದ್ದಾರೆ.

ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ನಾಲ್ಕನೇ ಬಾರಿ ವಿಚಾರಣೆಗೆ ಕರೆದಿದ್ದ ಸಿಐಡಿ ಅಧಿಕಾರಿಗಳು, ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ವಿಚಾರಣೆ ನಡೆಸಿ ಬಂಧಿಸಿದ್ದಾರೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಡಿಜಿಪಿ ದರ್ಜೆ ಅಧಿಕಾರಿ ಬಂಧನವಾದಂತಾಗಿದೆ.

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಬಯಲಾಗುತ್ತಿದ್ದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ವರ್ಗಾಯಿಸಲಾಗಿತ್ತು. ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವು ನೌಕರರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಅವರೆಲ್ಲರ ವಿಚಾರಣೆಯಿಂದ ಅಮೃತ್ ಪೌಲ್ ಸಹ ಅಕ್ರಮದಲ್ಲಿ ಭಾಗಿಯಾಗಿದ್ದು ಮೇಲ್ನೋಟಕ್ಕೆ ಕಂಡುಬಂದಿತ್ತು.

ಕಸ್ಟಡಿಗೆ ಪಡೆಯಲು ತಯಾರಿ: ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಅಮ್ರಿತ್ ಪೌಲ್ ಅವರನ್ನು ಕರೆತಂದಿರುವ ಸಿಐಡಿ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ಪಿಎಸ್ಐ ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪೌಲ್ ವಶಕ್ಕೆ, ಬಂಧನ ಸಾಧ್ಯತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.