ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನಲ್ಲಿರುವ ಆದಿನಾರಾಯಣಸ್ವಾಮಿ ಬೆಟ್ಟ ‘ಜೈವಿಕ ಪಾರಂಪರಿಕ ತಾಣ’, ದಕ್ಷಿಣ ಜಿಲ್ಲೆ ಕಡಬ ತಾಲ್ಲೂಕಿನ ಕುಮಾರಧಾರಾ ನದಿತೀರದ ಉರುಂಬಿ ಎಂಬ ಸ್ಥಳಕ್ಕೆ ‘ಸೂಕ್ಷ್ಮ ಜೈವಿಕ ಪ್ರದೇಶ’ ಪಟ್ಟ ನೀಡಲುಕರ್ನಾಟಕ ಜೀವವೈವಿಧ್ಯ ಮಂಡಳಿ ನಿರ್ಧರಿಸಿದೆ.

ನೆಲಮಂಗಲ ತಾಲ್ಲೂಕಿನ ಮಹಿಮಾರಂಗ ಬೆಟ್ಟ, ಕೋಲಾರದ ಅಂತರಗಂಗೆ ಬೆಟ್ಟವನ್ನು ಕೂಡಾ ಜೀವವೈವಿಧ್ಯತಾಣಗಳು ಎಂದು ಘೋಷಿಸಲುಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಲ್ಲದೆ, ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಶಕುನಗಿರಿ ಬೆಟ್ಟ ಪ್ರದೇಶವನ್ನು ಅದರ ಪಕ್ಕದಲ್ಲೇ ಇರುವ ಹೊಗರೆ ಕಾನುಗಿರಿ ಪಾರಂಪರಿಕ ತಾಣಕ್ಕೆ ಸೇರಿಸಲು ಶಿಫಾರಸು ಮಾಡಲಾಗಿದೆ. ಬೆಳ್ಳಕ್ಕಿಗಳ ತವರೂರಾಗಿರುವ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನ ಸೋಂದಾ ಗ್ರಾಮದ ಮುಂಡಿಗೆ ಕೆರೆಯನ್ನು ಪಕ್ಷಿಧಾಮವೆಂದು ಘೋಷಿಸುವಂತೆ ಸ್ಥಳೀಯರು ಸಲ್ಲಿಸಿದ ಪ್ರಸ್ತಾವನೆಯನ್ನು ಒಪ್ಪಿರುವ ಮಂಡಳಿ, ಈ ಬಗ್ಗೆ ವನ್ಯಜೀವಿ ಇಲಾಖೆಗೆ ಶಿಫಾರಸು ಮಾಡಿದೆ.

ರಾಜ್ಯದ ಎಂಟು ಸ್ಥಳಗಳಲ್ಲಿ ಮತ್ಸ್ಯಧಾಮಗಳನ್ನು ಗುರುತಿಸಿ ಘೋಷಿಸಲು ಮೀನುಗಾರಿಕಾ ಇಲಾಖೆಗೆ ಮಂಡಳಿ ಸೂಚಿಸಿದೆ. ಇನ್ನೂ ಏಳು ಸ್ಥಳಗಳಲ್ಲಿ ಅಪರೂಪದ ಮೀನು ವೈವಿಧ್ಯ ತಾಣಗಳನ್ನು ಗುರುತಿಸಿ, ಘೋಷಿಸಲು ನಿರ್ಧರಿಸಿದ್ದು, ಮೀನುಗಾರಿಕಾ ಇಲಾಖೆ ಜೊತೆ ಚರ್ಚಿಸಲು ಮಂಡಳಿ ಮುಂದಾಗಿದೆ. ವಿನಾಶದ ಅಂಚಿನಲ್ಲಿರುವ ಕುಮಟಾ ತಾಲ್ಲೂಕಿನ ಗಜನಿ ಕಗ್ಗಭತ್ತ, ಹಾಸನದ ರಾಜಮುಡಿ ಅಕ್ಕಿ ಮತ್ತು ಅಂಕೋಲಾ ತಾಲ್ಲೂಕಿನ ಕರೇಈಶಾಡು ಮಾವಿನಹಣ್ಣು ತಳಿಗಳಿಗೆ ಕೇಂದ್ರ ಸರ್ಕಾರ ಜಿಯಾಗ್ರಾಫಿಕಲ್ ಇಂಡಿಕೇಟರ್ ಸ್ಥಾನಮಾನ ನೀಡಬೇಕು ಎಂದೂ ಮಂಡಳಿ ಶಿಫಾರಸು ಮಾಡಿದೆ.

ರಾಜ್ಯದಲ್ಲಿ ಈಗಾಗಲೇ 10 ಪಾರಂಪರಿಕ ವೃಕ್ಷಗಳನ್ನು ಗುರುತಿಸಲಾಗಿದೆ. ಇನ್ನಷ್ಟು ಪಾರಂಪರಿಕ ವೃಕ್ಷಗಳನ್ನು ಗುರುತಿಸಲು ತೀರ್ಮಾನಿಸಲಾಗಿದೆ. ಈ ವೃಕ್ಷಗಳನ್ನು ಜೀವವೈವಿಧ್ಯ ಕಾಯ್ದೆ ಅಡಿಯಲ್ಲಿ ಘೋಷಿಸಲು ಮಾರ್ಗದರ್ಶಿ ಸೂತ್ರ ಸಿದ್ಧಪಡಿಸಿ ಸರ್ಕಾರದಿಂದ ಒಪ್ಪಿಗೆ ಪಡೆಯಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಗ್ರಾಮ ಸಾಮೂಹಿಕ ಭೂಮಿ, ಗ್ರಾಮ ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ಕುರಿತು ಸಮೀಕ್ಷೆ ನಡೆಸಿ ವರದಿ ಪಡೆಯಲು ತಜ್ಞರ ಸಮಿತಿ ರಚಿಸಲು ಕೂಡಾ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.