ಬೆಂಗಳೂರು; ಸಿದ್ದರಾಮಯ್ಯ ಅವರು 2013 ರಿಂದ 2018ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ತಮ್ಮ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಜಾಹೀರಾತುಗಳನ್ನು ಬಿಬಿಎಂಪಿ ವ್ಯಾಪ್ತಿಯ ಬಸ್ ತಂಗುದಾಣಗಳಲ್ಲಿ ಪ್ರದರ್ಶಿಸುವ ಮೂಲಕ ಬೊಕ್ಕಸಕ್ಕೆ ₹68 ಕೋಟಿಗೂ ಹೆಚ್ಚಿನ ಮೊತ್ತದ ನಷ್ಟ ಉಂಟು ಮಾಡಿದ್ದಾರೆ’ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಬಿಬಿಎಂಪಿ ಮಾಜಿ ಸದಸ್ಯ ಎನ್.ಆರ್.ರಮೇಶ್ ಅವರು ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಕರಣದ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ‘ದೂರಿನಲ್ಲಿ ಉಲ್ಲೇಖಿಸಲಾಗಿರುವ ಆಪಾದನೆಗಳನ್ನು ಸಾಬೀತುಪಡಿಸುವ ಯಾವುದೇ ಆಧಾರಗಳಿಲ್ಲ’ ಎಂಬ ಅಭಿಪ್ರಾಯದೊಂದಿಗೆ ವಜಾಗೊಳಿಸಿದ್ದಾರೆ. ದೂರಿನಲ್ಲಿ ಸಿದ್ದರಾಮಯ್ಯ ಸಚಿವ ಕೆ.ಜೆ.ಜಾರ್ಜ್ ಅಂದಿನ ಬಿಬಿಎಂಪಿ ಆಯುಕ್ತ ಐಎಎಸ್ ಅಧಿಕಾರಿ ಮಂಜುನಾಥ ಪ್ರಸಾದ್ ಮತ್ತಿತರರ ವಿರುದ್ಧ ಆಪಾದನೆ ಹೊರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.