ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಲಹೆಗಾರರು ಅನರ್ಹತೆಯಿಂದ ಪಾರು!

Published 23 ಫೆಬ್ರುವರಿ 2024, 20:09 IST
Last Updated 23 ಫೆಬ್ರುವರಿ 2024, 20:09 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ವಿಧಾನಸಭೆ ಅಥವಾ ವಿಧಾನ ಪರಿಷತ್‌ನ ಸದಸ್ಯರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ ಸಲಹೆಗಾರರು, ಯಾವುದೇ ಆಯೋಗದ ಅಧ್ಯಕ್ಷರು ಹಾಗೂ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷರಾಗಿ ನೇಮಕಗೊಂಡರೆ ಲಾಭದಾಯಕ ಹುದ್ದೆ ಹೊಂದಿದ ಕಾರಣದಿಂದ ಅವರು ಅನರ್ಹರಾಗದಂತೆ ತಡೆಯುವ ‘ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ಮಸೂದೆ–2024’ ಅನ್ನು ವಿಧಾನಸಭೆ ಶುಕ್ರವಾರ ಅಂಗೀಕರಿಸಿತು.

ವಿಧಾನಸಭಾ ಸದಸ್ಯರಾಗಿರುವ ಬಸವರಾಜ ರಾಯರಡ್ಡಿ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾಗಿ, ಬಿ.ಆರ್‌. ಪಾಟೀಲ ಮುಖ್ಯಮಂತ್ರಿಯವರ ಸಲಹೆಗಾರರಾಗಿ ಮತ್ತು ಆರ್‌.ವಿ. ದೇಶಪಾಂಡೆ ಅವರು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಈ ಮೂವರನ್ನೂ ಲಾಭದಾಯಕ ಹುದ್ದೆ ವ್ಯಾಪ್ತಿಯಿಂದ ಹೊರಗಿಟ್ಟು, ರಕ್ಷಿಸುವುದಕ್ಕೆ ತಿದ್ದುಪಡಿ ಮಸೂದೆ ರೂಪಿಸಲಾಗಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಮಸೂದೆ ಮಂಡಿಸಿದರು. ಈ ಮಸೂದೆಗೂ ಗದ್ದಲದ ಮಧ್ಯದಲ್ಲೇ ಅಂಗೀಕಾರ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT