ಬೆಂಗಳೂರು: ’ಬೆಂಗಳೂರು ಮಧ್ಯಸ್ಥಿಕೆ ಕೇಂದ್ರವು ಪ್ರತಿ ಭಾನುವಾರವೂ ಕಾರ್ಯ ನಿರ್ವಹಿಸಲಿದೆ’ ಎಂಬ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರ ನಿರ್ಧಾರಕ್ಕೆ ಬೆಂಗಳೂರು ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.

‘ಮುಖ್ಯ ನ್ಯಾಯಮೂರ್ತಿಗಳು ಈ ಕುರಿತಂತೆ ವಕೀಲರ ಜೊತೆ ಚರ್ಚೆ ನಡೆಸಿಲ್ಲ. ಇದೊಂದು ಏಕಪಕ್ಷೀಯ ನಿರ್ಧಾರ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಪ್ರಕಟಿಸಿರುವ ಈ ನಿರ್ಧಾರ. ಆದ್ದರಿಂದ ಕೂಡಲೇ ಎಲ್ಲರ ಜೊತೆಗೂ ಚರ್ಚೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು’ ಎಂದು ಅಧ್ಯಕ್ಷ ಎ.ಪಿ.ರಂಗನಾಥ್ ಮನವಿ ಮಾಡಿದ್ದಾರೆ.

‘ನಗರದ ವಕೀಲರು ಈಗಾಗಲೇ ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ನಗರದ ಸಂಚಾರ ದಟ್ಟಣೆಯ ನಡುವೆ ಬಿಡುವಿಲ್ಲದ ಶ್ರಮ ವಹಿಸಿ ದುಡಿಯುತ್ತಿದ್ದು ಮಾನಸಿಕ ಒತ್ತಡದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ 24X7 ಕಾರ್ಯ ನಿರ್ವಹಿಸಬೇಕು ಎಂಬ ಇರಾದೆ ಒಳ್ಳೆಯದಲ್ಲ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.