ಬೆಂಗಳೂರು: ವಾರಕ್ಕೆ ಆರು ದಿನಗಳು ಮೊಟ್ಟೆ ನೀಡಲು ಆರಂಭಿಸಿದ ನಂತರ ಮಧ್ಯಾಹ್ನದ ಬಿಸಿಯೂಟ ಸೇವಿಸುವ ಮಕ್ಕಳ ಸಂಖ್ಯೆಯಲ್ಲಿ ಶೇ 5.31ರಷ್ಟು ಹೆಚ್ಚಳವಾಗಿದೆ.

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಇದೇ ಶೈಕ್ಷಣಿಕ ವರ್ಷದ ಆರಂಭದಲ್ಲಿ ಮಧ್ಯಾಹ್ನ ಬಿಸಿಯೂಟದ ಜತೆಗೆ ವಾರಕ್ಕೆ ಎರಡು ದಿನಗಳು ಮೊಟ್ಟೆ ನೀಡಲಾಗುತ್ತಿತ್ತು. ಅಜೀಂ ಪ್ರೇಮ್ಜಿ ಪ್ರತಿಷ್ಠಾನ ₹1,500 ಕೋಟಿ ನೆರವು ನೀಡಿದ ನಂತರ 2024ರ ಸೆಪ್ಟೆಂಬರ್ನಿಂದ ವಾರದ ಆರು ದಿನ ಮೊಟ್ಟೆ ನೀಡಲಾಗುತ್ತಿದೆ. ಎರಡು ದಿನಗಳು ಮೊಟ್ಟೆ ವಿತರಿಸುವಾಗ 52.77 ಲಕ್ಷ ಮಕ್ಕಳಲ್ಲಿ ಶೇ 93.66ರಷ್ಟು ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದರು. ಈಗ ಶೇ 98.97ರಷ್ಟು ಮಕ್ಕಳು ಊಟಕ್ಕೆ ಹಾಜರಾಗುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.

ಜಿಲ್ಲಾವಾರು ಮಾಹಿತಿ ಪ್ರಕಾರ ಕೋಲಾರ ಜಿಲ್ಲೆಯಲ್ಲಿ ಹೆಚ್ಚಿನ ಮಕ್ಕಳು (ಶೇ 84.16) ಮೊಟ್ಟೆ ಸೇವಿಸುತ್ತಿದ್ದಾರೆ. ಚಿಕ್ಕೋಡಿ ಜಿಲ್ಲೆಯಲ್ಲಿ ಕಡಿಮೆ ಮಕ್ಕಳು (ಶೇ 30.97) ಮೊಟ್ಟೆ ಸೇವಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.