ಬೆಂಗಳೂರು: ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಸಿ’ ವೃಂದದ ಹುದ್ದೆಗಳ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಎರಡು ವರ್ಷ ಸಡಿಲಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸೆಪ್ಟೆಂಬರ್ 6ರಿಂದ 2027ರ ಡಿ. 31ರವರೆಗೆ ಅರ್ಜಿ ಆಹ್ವಾನಿಸಿ ಹೊರಡಿಸುವ ಎಲ್ಲ ನೇರ ನೇಮಕಾತಿ ಅಧಿಸೂಚನೆಗಳಿಗೆ ಈ ಆದೇಶ ಅನ್ವಯ ಆಗಲಿದೆ. ಇಂತಹ ಅವಕಾಶ ಒಂದು ಬಾರಿಗೆ ಸೀಮಿತವಾಗಿರಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಅವಕಾಶ ಸಿಗಲಿದೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಬರುವವರೆಗೆ, ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇಮಕಾತಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸತಾಗಿ ಯಾವುದೇ ಅಧಿಸೂಚನೆ ಹೊರಡಿಸದಂತೆ 2024ರ ಅ. 28ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಆದೇಶ ಹೊರಡಿಸಿತ್ತು.

ಒಳ ಮೀಸಲಾತಿಯನ್ನು ಮರು ವಿಂಗಡಿಸಿರುವ ಸರ್ಕಾರ, ತಕ್ಷಣದಿಂದ ಜಾರಿಗೆ ಬರುವಂತೆ ಆಗಸ್ಟ್ 28ರಂದು ಆದೇಶ ಹೊರಡಿಸಿತ್ತು. ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ ವಯೋಮಿತಿ ಸಡಿಲಿಸಲು ಕೂಡಾ ಸಚಿವ ಸಂಪುಟ ಸಭೆ ನಿರ್ಣಯ ತೆಗೆದುಕೊಂಡಿತ್ತು.

ಒಳ ಮೀಸಲಾತಿ ಜಾರಿಗೆ ಬಂದಿರುವ ಕಾರಣ ನೇರ ನೇಮಕಾತಿಯ ವೇಳೆ ಅನುಸರಿಸಬೇಕಾದ ‘ಪರಿಷ್ಕೃತ ಮೀಸಲಾತಿ ರೋಸ್ಟರ್’ ನಿಗದಿಪಡಿಸಿ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಒಳ ಮೀಸಲಾತಿ ಹಂಚಿಕೆ ಆದೇಶಕ್ಕೆ ಅನುಗುಣವಾಗಿ ಒಟ್ಟು 100 ರೋಸ್ಟರ್ ಬಿಂದುಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಗುರುತಿಸಿದ 17 ಬಿಂದುಗಳನ್ನು ‘ಪ್ರವರ್ಗವಾರು’ ಎ, ಬಿ ಮತ್ತು ಸಿ ಬಿಂದುಗಳೆಂದು ನಿಗದಿಪಡಿಸಲಾಗಿದೆ.

ಪರಿಷ್ಕೃತ ಮೀಸಲಾತಿ ರೋಸ್ಟರ್ ಮತ್ತು ಗರಿಷ್ಠ ವಯೋಮಿತಿ ಸಡಿಲಿಸಿ ಆದೇಶ ಹೊರಡಿಸಿರುವ ಕಾರಣ ನೇರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಡಿಪಿಎಆರ್ ಕ್ರಮ ವಹಿಸಲು ಮತ್ತು ನೇಮಕಾತಿ ಪ್ರಾಧಿಕಾರಗಳು ಹೊಸತಾಗಿ ಅಧಿಸೂಚನೆ ಹೊರಡಿಸಲು ಅವಕಾಶ ಆಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.