ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ ತರಬೇತಿಗೆ ಆಯ್ಕೆ ಉಡುಪಿಯಲ್ಲಿ 27, ದಕ್ಷಿಣಕನ್ನಡದಲ್ಲಿ 28ರಂದು ರ‍್ಯಾಲಿ

ಅಗ್ನಿಪಥ ಸೇನಾ ತರಬೇತಿ ಶಾಲೆಗೆ ಆಯ್ಕೆ
Last Updated 25 ಫೆಬ್ರುವರಿ 2023, 14:48 IST
ಅಕ್ಷರ ಗಾತ್ರ

ಮಂಗಳೂರು: ‘ಅಗ್ನಿಪಥ ಯೋಜನೆಯಡಿ ಸೇನೆಗೆ ಸೇರ್ಪಡೆಯಾಗುವವರಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಉಡುಪಿ ಜಿಲ್ಲೆಯಲ್ಲಿ ಇದೇ 27ರಂದು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ 28ರಂದು ರ‍್ಯಾಲಿ ನಡೆಯಲಿದೆ’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಇಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಉಡುಪಿ ಜಿಲ್ಲೆಯ ಕೋಟಿ ಚೆನ್ನಯ ಸೇನಾ ತರಬೇತಿ ಶಾಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ರಾಣಿ ಅಬ್ಬಕ್ಕ ಸೇನಾ ತರಬೇತಿ ಶಾಲೆಗಳಲ್ಲಿ ತಲಾ 100 ಮಂದಿಗೆ ತರಬೇತಿ ನೀಡಲಾಗುತ್ತದೆ. ನಾಲ್ಕು ತಿಂಗಳ ಉಚಿತ ತರಬೇತಿಗೆ ಉಡುಪಿ ಜಿಲ್ಲೆಯಿಂದ 309 ಅರ್ಜಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ 130 ಅರ್ಜಿಗಳು ಬಂದಿವೆ. ಅವರಲ್ಲಿ ಅರ್ಹರನ್ನು ಈ ರ‍್ಯಾಲಿಯಲ್ಲಿ ಆಯ್ಕೆ ಮಾಡಲಾಗುತ್ತದೆ’ ಎಂದು ಅವರು ಮಾಹಿತಿ ನೀಡಿದರು.

‘ಸೇನೆಗೆ ಸೇರ್ಪಡೆಗೆ ಪೂರಕವಾಗಿ ತರಬೇತಿ ನೀಡುವುದರ ಜೊತೆಗೆ ಪೊಲೀಸ್‌, ಅರಣ್ಯ ಇಲಾಖೆಗೆ ಸೇರ್ಪಡೆಯಾಗುವವರಿಗೂ ಈ ತರಬೇತಿ ಪ್ರಯೋಜನಕಾರಿ. ಮೊದಲ ತಂಡದ ತರಬೇತಿ ಕಾರ್ಯ ಇತ್ತೀಚೆಗಷ್ಟೇ ಪೂರ್ಣಗೊಂಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT