ಬೆಂಗಳೂರು: ಕೃಷಿ ಇಲಾಖೆಯಲ್ಲಿ ವಿವಿಧ ದರ್ಜೆಯ ಶೇ 57ರಷ್ಟು ಹುದ್ದೆಗಳು ಖಾಲಿ ಇದ್ದು, ಹೊರ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಹಿಂದಿನ ಸರ್ಕಾರ 368 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಿದೆ. ಇವುಗಳನ್ನು ಹೊರತುಪಡಿಸಿ ಇತರ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಒಟ್ಟು 8,982 ಹುದ್ದೆಗಳು ಮಂಜೂರಾಗಿದ್ದು, 3,787 ಹುದ್ದೆಗಳು ಭರ್ತಿ ಆಗಿವೆ. 5,195 ಹುದ್ದೆಗಳು ಖಾಲಿ ಇವೆ ಎಂದರು.