ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ, ಆಧಾರ್-ಲಿಂಕ್ನ ಮುಖ ಗುರುತಿಸುವಿಕೆ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿದೆ.

ಇಲಾಖೆಯ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಯಂತ್ರಗಳನ್ನು ಕೈಬಿಟ್ಟು, ಮೊಬೈಲ್ ಆಧಾರಿತ ‘ಕಾಮ್ಸ್’ (ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ) ಜಾರಿಗೊಳಿಸಲು ಸೂಚಿಸಲಾಗಿದೆ. ಮೊದಲ ಹಂತದಲ್ಲಿ ಆಯುಕ್ತರ ಕಚೇರಿ, ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರ ಕಚೇರಿ, ಆಯಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಎಲ್ಲ ಸಿಬ್ಬಂದಿ ಹೊಸ ವ್ಯವಸ್ಥೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಕಾಮ್ಸ್ ಬಳಸಿ ಹಾಜರಾತಿ ನೀಡಬೇಕು ಎಂದು ಸೂಚಿಸಿದೆ.

ಇಲಾಖೆ ಈಗಾಗಲೇ ಪಿಯು ಕಾಲೇಜು ಉಪನ್ಯಾಸಕರು ಹಾಗೂ ಕೆಲ ಆಯ್ದ ಶಾಲೆಗಳಲ್ಲಿ ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ ಜಾರಿಗೆ ತಂದಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೂ ಎಐ ಆಧಾರಿತ ಮುಖ ಗುರುತಿಸುವಿಕೆ ಹಾಜರಾತಿ ವ್ಯವಸ್ಥೆ ಕಡ್ಡಾಯವಾಗಿ ಜಾರಿಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.