ಬೆಂಗಳೂರು: ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಸಭೆ ಮಂಗಳವಾರ (ಜುಲೈ 15) ಮತ್ತು ಬುಧವಾರ (ಜುಲೈ 16) ನಗರದಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ವಿವಿಧ ರಾಜ್ಯಗಳ ಹಾಲಿ ಮತ್ತು ಮಾಜಿ ಸಚಿವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಜುಲೈ 15ರಂದು ಸಂಜೆ 5 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಮತ್ತು ಜುಲೈ 16ರಂದು ಬೆಳಿಗ್ಗೆ 10 ಗಂಟೆಗೆ ಹೋಟೆಲ್ ಶಾಂಗ್ರಿಲಾದಲ್ಲಿ ಸಭೆ ನಡೆಯಲಿದೆ.

ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಹಾರ ಒದಗಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಈ ಮಂಡಳಿಯನ್ನು ಎಐಸಿಸಿ ರಚಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಮಂಡಳಿಯ ರಚನೆಗೆ ಅನುಮೋದನೆ ನೀಡಿದ್ದರು. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿ ಒಟ್ಟು 24 ಮಂದಿ ಈ ಮಂಡಳಿಯ ಸದಸ್ಯರು.

ರಾಜ್ಯದಿಂದ ಸಚಿವರಾದ ಬೈರತಿ ಸುರೇಶ್, ಮಧು ಬಂಗಾರಪ್ಪ, ಸಂತೋಷ್ ಲಾಡ್, ಎನ್.ಎಸ್. ಬೋಸರಾಜು, ಮಂಕಾಳ ವೈದ್ಯ, ಎಐಸಿಸಿ ಕಾರ್ಯದರ್ಶಿಗಳಾದ ಸೂರಜ್ ಹೆಗ್ಡೆ, ಪಿ.ವಿ. ಮೋಹನ್ ಸೇರಿದಂತೆ ವಿವಿಧ ರಾಜ್ಯಗಳ ಪ್ರಮುಖರು ಸೇರಿ ಒಟ್ಟು 25 ಮಂದಿ ವಿಶೇಷ ಆಹ್ವಾನಿತರಾಗಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.