ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ಸುಮಾರು ಒಂದೂವರೆ ತಾಸು ಚರ್ಚೆ ನಡೆಸಿದರು.
ತುರ್ತು ಸಚಿವ ಸಂಪುಟ ಸಭೆಯ ಬಳಿಕ ಸದಾಶಿವನಗರದ ನಗರದಲ್ಲಿರುವ ಖರ್ಗೆ ಅವರ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ, ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರ ಮತ್ತು ಮುಂದಿನ ನಡೆಯ ಕುರಿತು ಸಮಾಲೋಚನೆ ನಡೆಸಿದರು.