ಬೆಂಗಳೂರು: ‘ರಾಜ್ಯದಲ್ಲಿ ಆರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಪ್ರಾರಂಭಿಸುವ ಸರ್ಕಾರದ ನಡೆ ಖಂಡನೀಯ’ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್ಒ) ತಿಳಿಸಿದೆ.

‘ಸರ್ಕಾರಿ ಶಾಲೆಗಳನ್ನು ಮುಚ್ಚುವುದು ಅಥವಾ ವಿಲೀನಗೊಳಿಸುವ ಉದ್ದೇಶದಿಂದ ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ. ಸರ್ಕಾರ ಈ ಹಿಂದೆ ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಅಥವಾ ವಿಲೀನಗೊಳಿಸುವುದಿಲ್ಲ ಎಂಬ ಭರವಸೆ ನೀಡಿತ್ತು. ಈಗ ಗ್ರಾಮ ಪಂಚಾಯಿತಿಗೆ ಒಂದು ಕೆಪಿಎಸ್ ಶಾಲೆಯನ್ನು ಪ್ರಾರಂಭಿಸುತ್ತಿರುವುದಕ್ಕೆ ನಮ್ಮ ವಿರೋಧವಿದೆ’ ಎಂದು ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹೇಳಿದ್ದಾರೆ.

‘ಸುಧಾರಣೆಯ ಹೆಸರಿನಲ್ಲಿ ಶಿಕ್ಷಣದ ಮತ್ತಷ್ಟು ವ್ಯಾಪಾರೀಕರಣ ಮತ್ತು ಖಾಸಗೀಕರಣ ಆಗಲಿದೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದು ಹಾಗೂ ಮೂಲಸೌಕರ್ಯ, ಕಲಿಕಾ ಸಾಮಗ್ರಿಗಳು ಪೂರೈಸುವ ಮೂಲಕ ಬಲಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.