ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ ಕೆಐಎ: ಏರ್‌ ಇಂಡಿಯಾ ಜತೆ ಒಪ್ಪಂದ

ಏರ್‌ ಇಂಡಿಯಾ ಜತೆ ವಿಮಾನ ನಿಲ್ದಾಣ ಪ್ರಾಧಿಕಾರ ಒಪ್ಪಂದ
Published 8 ಏಪ್ರಿಲ್ 2024, 15:45 IST
Last Updated 8 ಏಪ್ರಿಲ್ 2024, 15:45 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಕೆಐಎ) ದಕ್ಷಿಣ ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ (ಪ್ರೀಮಿಯರ್‌ ಏವಿಯೇಷನ್‌ ಹಬ್) ಅಭಿವೃದ್ಧಿ ಪಡಿಸಲು ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಸೋಮವಾರ ಏರ್‌ ಇಂಡಿಯಾ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ಕುರಿತು ಮಾತನಾಡಿದ ಏರ್ ಇಂಡಿಯಾದ ಮುಖ್ಯಸ್ಥ ಕ್ಯಾಂಪ್‌ಬೆಲ್ ವಿಲ್ಸನ್, ‘ವಿಮಾನ ನಿಲ್ದಾಣದಲ್ಲಿ ದಕ್ಷ ಹಾಗೂ ಸುರಕ್ಷಿತ  ಕಾರ್ಯಾಚರಣೆ ನಡೆದರೆ ಗ್ರಾಹಕರಿಗೆ ಉತ್ತಮ ಅನುಭವ ಸಿಗಲಿದೆ. ಇದನ್ನು ಗುರಿಯಾಗಿಸಿಕೊಂಡು ವಾಯು ಸಂಪರ್ಕ ವಿಸ್ತರಿಸಲು ಮುಂದಾಗಿದ್ದೇವೆ’ ಎಂದು ತಿಳಿಸಿದರು.

ಕೆಐಎ ಸಿಇಒ ಹರಿ ಮರಾರ್‌ ಮಾತನಾಡಿ, ‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದಕ್ಷಿಣ ಭಾರತದಲ್ಲಿಯೇ ಅತಿ ಹೆಚ್ಚು ಪ್ರಯಾಣಿಕರು ಪ್ರಯಾಣಿಸುವ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ ಹೊಂದಿದೆ. ಈ ಒಪ್ಪಂದದೊಂದಿಗೆ ವಿಶ್ವದ ವಿವಿಧ ಮಹಾನಗರಗಳಿಗೆ ನೇರ ವಿಮಾನ ಸಂಪರ್ಕ ಸಾಧ್ಯವಾಗಲಿದೆ. ಜತೆಗೆ ಪ್ರಯಾಣಿಕರಿಗೆ ಉತ್ತಮ ಪ್ರಯಾಣದ ಅನುಭವ ದೊರೆಯಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT