ನವದೆಹಲಿ: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಇರುವುದರಿಂದ ಭೂಸ್ವಾಧೀನಕ್ಕೆ ಅವಕಾಶ ನೀಡಬಾರದೆಂದು ಕೇಂದ್ರ ಸರ್ಕಾರಕ್ಕೆ ಆಂಧ್ರಪ್ರದೇಶ ಸರ್ಕಾರ ಪತ್ರ ಬರೆದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ಸಂಸದರ ಸಭೆ ಕರ್ನಾಟಕ ಭವನದಲ್ಲಿ ಮಂಗಳವಾರ ಸಂಜೆ 6ಕ್ಕೆ ನಡೆಯಲಿದೆ.

ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ಗೆ ಹೆಚ್ಚಿಸುವುದಕ್ಕೆ ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿವೆ. ಇತ್ತೀಚೆಗೆ ಆಂಧ್ರ ಪ್ರದೇಶ ಸರ್ಕಾರವು ಕೇಂದ್ರ ಜಲಶಕ್ತಿ ಸಚಿವಾಲಯದ ಉನ್ನತ ಅಧಿಕಾರಿಗಳಿಗೆ ಪತ್ರ ಬರೆದು ಭೂಸ್ವಾಧೀನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿತ್ತು. ಆ ಬಳಿಕ ಸಚಿವಾಲಯವು ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು ಸ್ಪಷ್ಟನೆ ಕೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.