ನವದೆಹಲಿ: ಕರ್ನಾಟಕದ ಹುಬ್ಬಳ್ಳಿ–ಧಾರವಾಡದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು (ಏಮ್ಸ್) ಸ್ಥಾಪಿಸುವ ಪ್ರಸ್ತಾವನೆ ಬಂದಿದ್ದು, ಅದಕ್ಕೆ ಅನುಮೋದನೆ ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ತಿಳಿಸಿದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೋಕಸಭೆಯಲ್ಲಿ ಶುಕ್ರವಾರ ಕೇಳಿದ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ಬೇರೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ ಅಡಿಯಲ್ಲಿ ದೇಶದ 22 ಕಡೆಗಳಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಸಚಿವರು ಹಾಗೂ ಸಂಸದರ ನಿಯೋಗವು ಆರೋಗ್ಯ ಸಚಿವರಿಗೆ ಎರಡು ಸಲ ಮನವಿ ಸಲ್ಲಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಎರಡು ಬಾರಿ ಪತ್ರ ಬರೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.