ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಶಾಸಕ ವಿನಯ್ ಕುಲಕರ್ಣಿ ನೇಮಕವಾಗಿದ್ದಾರೆ.

ಉಪಾಧ್ಯಕ್ಷರಾಗಿದ್ದ ಧಾರವಾಡದ ಶಿವಾನಂದ ಆರ್. ಅಂಬರಗಟ್ಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ವಿನಯ್ ಅವರನ್ನು ನೇಮಿಸಲಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಅಧಿಕಾರ ಸ್ವೀಕಾರ:

ವೀರಶೈವ ಮಹಾಸಭಾದ ಕಚೇರಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ವಿನಯ್ ಕುಲಕರ್ಣಿ ಅಧಿಕಾರ ಸ್ವೀಕರಿಸಿದರು.

ಸಮಾರಂಭದಲ್ಲಿ ಮಾತನಾಡಿದ ಮಹಾಸಭಾದ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ಸಮಾಜದ ಸರ್ವಾಂಗೀಣ ಅಭ್ಯುದಯಕ್ಕಾಗಿ ಸಭಾದ ಎಲ್ಲ ಪದಾಧಿಕಾರಿಗಳೂ ಸಂಘಟಿತರಾಗಿ ಶ್ರಮಿಸಬೇಕು. ಸಮಾಜ ಪ್ರಸ್ತುತ ಕವಲು ದಾರಿಯಲ್ಲಿದೆ. ಏಕತೆ ಇದ್ದರೆ ಶಕ್ತಿ ಬರುತ್ತದೆ. ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳೂ ಒಗ್ಗೂಡಲು ಇದು ಸಕಾಲ ಎಂದರು.

ಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಮುಖಂಡರಾದ ರೇಣುಕಾಪ್ರಸನ್ನ, ಸಚ್ಚಿದಾನಂದಮೂರ್ತಿ, ಶರಣು ಮೋದಿ, ಪ್ರಭಾಕರ್ ಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.