ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಕೋವಿಡ್-19 ನಿಯಂತ್ರಣಕ್ಕಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ನಾಯಕರ ಸಭೆ ನಡೆಯಿತು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಕೊರೊನಾ ವೈರಸ್ ಸೋಂಕು ಹರಡದಂತೆ ನಿಯಂತ್ರಿಸಲು ಬೇಕಾದ ಹಲವು ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಇದನ್ನೂ ಓದಿ:ನಮ್ಮ ತಪ್ಪಿಂದ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ

1. ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ. ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ.

2. ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೂರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು.

3. ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.

4. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.

5. ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು.

6. ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.

7. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು.

8. ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು.

9. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆ ಸೂಕ್ತ ವ್ಯವಸ್ಥೆ ಮಾಡಲಾಗುವುದು.

10. ಪಡಿತರವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.

11. ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ ಅವರನ್ನು ಅಭಿನಂದಿಸುತ್ತೇನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.