ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಲಯನ್ಸ್ ವಿ.ವಿ: ಇಡಿ ಪ್ರಕರಣ ರದ್ದು

Published 20 ಮಾರ್ಚ್ 2024, 16:25 IST
Last Updated 20 ಮಾರ್ಚ್ 2024, 16:25 IST
ಅಕ್ಷರ ಗಾತ್ರ

ಬೆಂಗಳೂರು: ಹಣ ದುರ್ಬಳಕೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿ ಅಲಯನ್ಸ್‌ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮಧುಕರ್ ಜಿ.ಅಂಗೂರ್‌ ವಿರುದ್ಧ ಜಾರಿ ನಿರ್ದೇಶನಾಲಯ (ಇ–ಡಿ) ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಸಂಬಂಧ ಮಧುಕರ್ ಅಂಗೂರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದ್ದು, ‘ಅಗತ್ಯ ಎನಿಸಿದರೆ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ ಮುಂದೆ ಈ ಸಂಬಂಧ ಮರು ಪರಿಶೀಲನಾ ಅರ್ಜಿ ಸಲ್ಲಿಸಿ ಅರ್ಜಿಯನ್ನು ಪುನಃ ಪರಿಗಣಿಸುವಂತೆ ಕೋರಲು ಸ್ವತಂತ್ರವಿದೆ’ ಎಂದು ತಿಳಿಸಿದೆ.

‘ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದರೆ, ಭಾರತೀಯ ದಂಡ ಸಂಹಿತೆಯ ಕಲಂ 120ಬಿ ಆರೋಪವೊಂದನ್ನು ಹೊರತುಪಡಿಸಿದಂತೆ ಇತರೆ ಅರೋಪಗಳು ಪಿಎಂಎಲ್ಎ ಕಾಯ್ದೆಯು ಷೆಡ್ಯೂಲ್ಡ್‌ ಅಪರಾಧಗಳ ಪಟ್ಟಿಯಲ್ಲಿ ಬರುವುದಿಲ್ಲ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ಪ್ರಕರಣ ರದ್ದುಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT